DharwadDistrictsKarnatakaLatestMain Post

ಈದ್ಗಾ ಮೈದಾನ ವಿಚಾರವಾಗಿ ಹಿಂದೂ ಸಂಘಟನೆಗಳ ಸವಾಲು – ಎಚ್ಚೆತ್ತ ಪಾಲಿಕೆ ದಶ ದಿಕ್ಕುಗಳಲ್ಲಿ ಹದ್ದಿನ ಕಣ್ಣು

- ಮೈದಾನದ ಸುತ್ತಲೂ ಸಿಸಿ ಕ್ಯಾಮೆರಾ ಅಳವಡಿಕೆ

ಹುಬ್ಬಳ್ಳಿ: ಈದ್ಗಾ ಮೈದಾನದ ವಿಚಾರದಲ್ಲಿ ಹುಬ್ಬಳ್ಳಿ-ಧಾರವಾಡ ಪಾಲಿಕೆಗೆ ಟೆಕ್ಷನ್ ಶುರುವಾಗಿದೆ. ಹಿಂದೂ ಸಂಘಟನೆಗಳ ಸವಾಲಿಗೆ ಪಾಲಿಕೆ ಮತ್ತು ಪೊಲೀಸ್ ಇಲಾಖೆ ಹೆದರಿಕೊಂಡಿದೆಯಾ ಎಂಬ ಅನುಮಾನ ಮೂಡಿದೆ.

ಸದನ ಸಮಿತಿ ವರದಿ ಬರುವ ಮುಂಚಿತವಾಗಿಯೇ ಈದ್ಗಾ ಮೈದಾನದ ಸುತ್ತಲೂ ಕಣ್ಗಾವಲಿಟ್ಟಿರುವ ಅಧಿಕಾರಿಗಳು, ಈದ್ಗಾ ಮೈದಾನದಲ್ಲಿ ಪಾಲಿಕೆಯಿಂದ ಏಕಾಏಕಿ 7 ಕಡೆ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಎಲ್ಲಾ ಮುಖ್ಯ ಗೇಟ್‌ಗಳಿಗೆ ಬೀಗ ಸಹ ಹಾಕಲಾಗಿದೆ. ಇದಕ್ಕೆ ಪೊಲೀಸ್ ಇಲಾಖೆ ಸಹ ಸಾಥ್ ನೀಡಿದೆ. ಇದನ್ನೂ ಓದಿ: ಇಂಡಿಯಾ, ಪಾಕ್ ಹೈವೋಲ್ಟೇಜ್ ಕ್ರಿಕೆಟ್- ಭಾರತ ಗೆಲುವಿಗೆ ಮುಸ್ಲಿಮರಿಂದ ವಿಶೇಷ ಪೂಜೆ

ಅವಕಾಶ ಸಿಗಲಿ, ಸಿಗದೇ ಇರಲಿ. ಈ ಬಾರಿ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡುತ್ತೇವೆ ಅಂತ ಹಿಂದೂ ಪರ ಸಂಘಟನೆಗಳು ಸವಾಲು ಹಾಕಿದ್ದವು. ಈ ಹಿನ್ನೆಲೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಈದ್ಗಾ ಮೈದಾನದ ದಶ ದಿಕ್ಕುಗಳಲ್ಲೂ ಹದ್ದಿನ ಕಣ್ಣಿಡಲು ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಮುಂದಾಗಿವೆ. ಇದನ್ನೂ ಓದಿ: ಮುರುಘಾ ಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ: ಬಿಎಸ್‍ವೈ

Live Tv

Leave a Reply

Your email address will not be published.

Back to top button