ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧನ ಮಾಡಿದ್ದಾರೆ.
ಕೊಲೆ ಮಾಡಿದ ಆರೋಪಿಗಳ ಜೊತೆ ನಿರಂತರ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಇಂದು ಮೈಸೂರಿನ ತೋಟದ ಮನೆಯಲ್ಲಿ ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಈಗ ಪೊಲೀಸರು ದರ್ಶನ್ ಅವರನ್ನು ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ನಡೆಸುತ್ತಿದ್ದಾರೆ.


ಬಂಧನ ಮಾಡಿದ್ದು ಯಾಕೆ?
ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ ಅವರನ್ನು ರೇಣುಕಾಸ್ವಾಮಿ ಅವರನ್ನು ಜೂನ್ 9 ಭಾನುವಾರ ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ. ಪೊಲೀಸ್ ವಿಚಾರಣೆಯ ಸಂದರ್ಭದಲ್ಲಿ ಕೊಲೆ ಆರೋಪಿಗಳು ದರ್ಶನ್ ಸೂಚನೆಯಂತೆ ಕೊಲೆ ಮಾಡಿದ್ದೇವೆ. ಕೊಲೆಗೆ ದರ್ಶನ್ ಸುಪಾರಿ ನೀಡಿದ್ದರು ಎಂದು ಆರೋಪಿಗಳು ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ.
This Is A Breaking Story More Details Awaited