Tuesday, 16th July 2019

ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಿಸಿಕೊಳ್ಳಲ್ಲ ಡಿ ಬಾಸ್!

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಮ್ಮನ್ನೆಲ್ಲ ಅಗಲಿರುವುದರಿಂದ ಈ ಬಾರಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ, ಇದಕ್ಕೆ ಅಭಿಮಾನಿಗಳು ಸಹಕರಿಸಬೇಕು ಅಂತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡಿದ್ದಾರೆ.

ಬರುವ ಫೆಬ್ರವರಿ 16ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬವಿದೆ. ಇಲ್ಲಿಯವರೆಗೆ ಅವರ ಅಭಿಮಾನಿಗಳು ದೂರದ ಊರುಗಳಿಂದ ಬಂದು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅದ್ಧೂರಿಯಿಂದ ಆಚರಿಸುತ್ತಾ ಬಂದಿದ್ದಾರೆ. ಆದ್ರೆ ಈ ಬಾರಿ ದರ್ಶನ್ ಅವರು ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಕೊಳ್ಳಲು ಇಷ್ಟ ಪಡುತ್ತೇನೆ. ಇದಕ್ಕೆ ಅಭಿಮಾನಿಗಳು ಸಹಕರಿಸಬೇಕು ಎಂದು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ದರ್ಶನ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹುಟ್ಟುಹಬ್ಬದ ಕುರಿತು ಫೋಟೋ ಹಾಕಿ ಯಾಕೆ ಹುಟ್ಟುಹಬ್ಬ ಅದ್ಧೂರಿಯಾಗಿ ಬೇಡ ಅಂತ ವಿವರಿಸಿದ್ದಾರೆ. ಪ್ರೀತಿಯ ಅಭಿಮಾನಿಗಳಿಗೆ ನಿಮ್ಮ ದಾಸ ದರ್ಶನ್ ತೂಗುದೀಪ್ ಮಾಡುವ ವಿನಂತಿ. ನನ್ನ ಹುಟ್ಟುಹಬ್ಬದ ದಿನ ನೀವೆಲ್ಲ ದೂರ ದೂರದ ಊರುಗಳಿಂದ ಬಂದು ಶುಭಕೋರಿ ನಿಮ್ಮದೇ ಹುಟ್ಟುಹಬ್ಬ ಎನ್ನುವಂತೆ ಸಂಭ್ರಮಿಸುವುದು ನನ್ನ ಯಾವುದೋ ಜನ್ಮದ ಪುಣ್ಯವೆಂದು ಭಾವಿಸುತ್ತೇನೆ. ಆದರೆ ಈ ವರ್ಷ “ಅಂಬಿ ಅಪ್ಪಾಜಿ” ನಮ್ಮನ್ನು ಅಗಲಿ ದೂರವಾದ ಕಾರಣ ನನ್ನ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಬೇಕೆಂದು ಕೇಳಿಕೊಳ್ಳುತ್ತೇನೆ.

“ಬ್ಯಾನರ್, ಕೇಕ್ ಹಾಗೂ ಹಾರವನ್ನೂ” ಯಾರು ಕೂಡ ತರಬೇಡಿ. ಅದೇ ಹಣವನ್ನು ನಿಮ್ಮ ಊರಿನಲ್ಲಿರುವ “ಅನಾಥ ಮಕ್ಕಳ ವಿದ್ಯಾಭ್ಯಾಸಕ್ಕೆ” ಮೀಸಲಾಗಿಡಿ. ಈ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಮ್ಮ ಅಕ್ಕ ಪಕ್ಕದ ನಿವಾಸಿಗಳಿಗೆ ತೊಂದರೆ ಕೊಡುವುದು, ಪಟಾಕಿ ಹೊಡೆಯುವುದು, ಕಾಂಪೌಂಡ್ ಹತ್ತುವುದು, ಹೂ ಕುಂಡಗಳನ್ನು ಬೀಳಿಸುವುದು ಹಾಗೂ ಅವರ ಸ್ವತ್ತುಗಳಿಗೆ ಹಾನಿ ಮಾಡಬಾರದು. ಇಂತಹ ಅನುಚಿತ ವರ್ತನೆ ತೋರಬಾರದು. ನನ್ನ ಬಗ್ಗೆ ಇಷ್ಟೆಲ್ಲ ಪ್ರೀತಿ ಅಭಿಮಾನ ಇಟ್ಟಿರುವ ನೀವೆಲ್ಲ ನನ್ನ ಕೋರಿಕೆಯನ್ನು ನಡೆಸಿಕೊಡುವಿರೆಂದು ನಂಬಿರುತ್ತೇನೆ ಹಾಗೂ ಸಂಘದ ಕಾರ್ಯಕರ್ತರಿಗೆ ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಸಹಕರಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ಇಂತಿ ನಿಮ್ಮ ಪ್ರೀತಿಯ ದರ್ಶನ್ ಎಂದು ಸಹಿಮಾಡಿ ಟ್ವೀಟ್ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *