ಮೈಸೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಸುದ್ದಿಯಲ್ಲಿದ್ದಾರೆ. ಅದು ನೆಗಟಿವ್ ವಿಚಾರಕ್ಕೆ ಅಲ್ಲ. ಬದಲಾಗಿ ತುಂಬಾ ಪಾಸಿಟಿವ್ ವಿಚಾರದಲ್ಲಿ ಸುದ್ದಿ ಆಗ್ತಿದ್ದಾರೆ.
ಪ್ರಾಣದ ಹಂಗು ತೊರೆದು ವನ್ಯಜೀವಿ ಕಳ್ಳಬೇಟೆ ತಡೆಗಟ್ಟುವ ಕೆಲಸ ಮಾಡುವ ಗುತ್ತಿಗೆ ನೌಕರರ ನೆರವಿಗೆ ಸ್ವಯಂ ಪ್ರೇರಿತರಾಗಿ ಸಹಾಯಕ್ಕೆ ಮುಂದಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ವನ್ಯಜೀವಿ ಕಳ್ಳಬೇಟೆ ಶಿಬಿರದಲ್ಲಿ ಕೆಲಸ ಮಾಡುವ ಗುತ್ತಿಗೆ ನೌಕರರ ನೆರವಿಗೆ ದರ್ಶನ್ ಧಾವಿಸಿದ್ದಾರೆ. ಈ ಮೂಲಕ ಇನ್ನೊಂದು ಮಾನವೀಯ ಕೆಲಸವನ್ನು ದರ್ಶನ್ ಸದ್ದಿಲ್ಲದೆ ಮಾಡಿದ್ದಾರೆ.
Advertisement
Advertisement
ಇತ್ತೀಚೆಗೆ ಶಿಬಿರಕ್ಕೆ ಹೋಗಿದ್ದ ದರ್ಶನ್ ಗುತ್ತಿಗೆ ನೌಕರರ ಕಷ್ಟ ಆಲಿಸಿದ್ದರು. ತಕ್ಷಣ ಈ ನೌಕರರ ಕ್ಷೇಮಾಭಿವೃದ್ಧಿಗೆ 12 ಲಕ್ಷ ರೂಪಾಯಿ ನೀಡಿದ್ದಾರೆ. ಅರಣ್ಯ ಇಲಾಖೆಯೂ ಈ ಹಣವನ್ನು ಬ್ಯಾಂಕ್ ನಲ್ಲಿ ಡಿಪಾಸಿಟ್ ಮಾಡಿ ಅದರ ಬಡ್ಡಿ ಹಣವನ್ನು ಈ ನೌಕರರ ಕಷ್ಟಕ್ಕೆ ನೀಡಲು ಮುಂದಾಗಿದೆ.
Advertisement
ಇದಕ್ಕೂ ಮೊದಲು ದಾಸ ಒಂದು ರೂಪಾಯಿ ಹಣ ಪಡೆಯದೆ ದರ್ಶನ್ ಅರಣ್ಯ ಇಲಾಖೆ ರಾಯಭಾರಿ ಆಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಅರಣ್ಯ ಇಲಾಖೆ ರಾಯಭಾರಿಯಾಗಿ ವನ್ಯಜೀವಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸೋ ಕೆಲಸದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದು ವನ್ಯಜೀವಿ ಪ್ರೇಮಿಗಳಿಗೆ ಹೆಚ್ಚು ಸಂತಸ ತಂದಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv