ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ‘ಮುನಿರತ್ನ ಕುರುಕ್ಷೇತ್ರ’ ಚಿತ್ರ ಆಗಸ್ಟ್ 9 ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಸಂಬಂಧಿಸಿದಂತೆ ದರ್ಶನ್ ಟ್ವೀಟ್ ಮಾಡಿ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ದರ್ಶನ್ ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಎನ್ನುವುದು ಬಹುತಾರಾಗಣದ ಚಿತ್ರ. ಎಲ್ಲರನ್ನು ಸಮಾನಕಾರವಾಗಿ ಕಾಣಬೇಕೆಂಬ ಸದುದ್ದೇಶದಿಂದ ಯಾವ ತಾರೆಯ ಫೋಟೋಗಳನ್ನು ಪಾಸ್‍ಗಳ ಮೇಲೆ ಪ್ರಿಂಟ್ ಮಾಡಿಲ್ಲ. ಇಂತಹ ಚಿಕ್ಕ ವಿಷಯಗಳಿಗೆಲ್ಲ ಬೇಸರವನ್ನು ವ್ಯಕ್ತಪಡಿಸುವ ಅವಶ್ಯಕತೆ ಇಲ್ಲ. ಚಿತ್ರದಲ್ಲಿ ಎಲ್ಲರಿಗೂ ತಕ್ಕ ನ್ಯಾಯವನ್ನು ಒದಗಿಸಲಾಗಿದೆ. ಆರಾಮಾಗಿ ಆಡಿಯೋ ಬಿಡುಗಡೆಯಲ್ಲಿ ಪಾಲ್ಗೊಳ್ಳಿ” ಎಂದು ಟ್ವೀಟ್ ಮಾಡಿದ್ದಾರೆ.
Advertisement
ಕುರುಕ್ಷೇತ್ರ ಎನ್ನುವುದು ಬಹುತಾರಾಗಣದ ಚಿತ್ರ.ಎಲ್ಲರನ್ನು ಸಮಾನಕಾರವಾಗಿ ಕಾಣಬೇಕೆಂಬ ಸದುದ್ದೇಶದಿಂದ ಯಾವ ತಾರೆಯ ಫೋಟೋಗಳನ್ನು ಪಾಸ್ ಗಳ ಮೇಲೆ ಪ್ರಿಂಟ್ ಮಾಡಿಲ್ಲ.ಇಂತಹ ಚಿಕ್ಕ ವಿಷಯಗಳಿಗೆಲ್ಲ ಬೇಸರವನ್ನು ವ್ಯಕ್ತಪಡಿಸುವ ಅವಶ್ಯಕತೆ ಇಲ್ಲ.ಚಿತ್ರದಲ್ಲಿ ಎಲ್ಲರಿಗೂ ತಕ್ಕ ನ್ಯಾಯವನ್ನು ಒದಗಿಸಲಾಗಿದೆ.ಆರಾಮಾಗಿ ಆಡಿಯೋ ಬಿಡುಗಡೆಯಲ್ಲಿ ಪಾಲ್ಗೊಳ್ಳಿ pic.twitter.com/IMhmV6ugT0
— Darshan Thoogudeepa (@dasadarshan) July 1, 2019
Advertisement
ಕುರುಕ್ಷೇತ್ರ ಚಿತ್ರದಲ್ಲಿ ರೆಬಲ್ ಸ್ಟಾರ್ ಅಂಬರೀಶ್, ಕ್ರೇಜಿಸ್ಟಾರ್ ರವಿಚಂದ್ರನ್, ಅರ್ಜುನ್ ಸರ್ಜಾ, ಡೈಲಾಗ್ ಕಿಂಗ್ ಸಾಯಿಕುಮಾರ್, ಶಶಿಕುಮಾರ್, ಆರ್ಮುಗಂ ಖ್ಯಾತಿಯ ರವಿಶಂಕರ್, ಶ್ರೀನಿವಾಸ ಮೂರ್ತಿ ಹಾಗೂ ಪ್ರಣಯ ರಾಜ ಶ್ರೀನಾಥ್ ಅಭಿನಯಿಸಿದ್ದಾರೆ. ಭಾರತಿ ವಿಷ್ಣುವರ್ಧನ್, ಹರಿಪ್ರಿಯಾ, ಮೇಘನಾ ರಾಜ್, ಪವಿತ್ರಾ ಲೋಕೇಶ್ ಕುರುಕ್ಷೇತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಚಿತ್ರತಂಡ ಈ ಸಿನಿಮಾದ ಟೀಸರ್ ರಿಲೀಸ್ ಮಾಡಿದೆ.
Advertisement
Advertisement
ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿಬಂದಿದೆ.