ಮೈಸೂರು: ಜಿಲ್ಲೆಯ ಹೊರವಲಯದ ಹಿನಕಲ್ ಬಳಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರ್ ಅಪಘಾತಕ್ಕೀಡಾಗಿ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಯಜಮಾನ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಎಲ್ಲರೂ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರು ವಾಟ್ಸಪ್ ಮೂಲಕ ಆಡಿಯೋ ರೆಕಾರ್ಡ್ ಮಾಡಿ ವಿನಂತಿಸಿಕೊಂಡಿದ್ದಾರೆ.
Advertisement
ದರ್ಶನ್ ಮನವಿಯೇನು?:
`ಎಲ್ಲರಿಗೂ ನಮಸ್ಕಾರಪ್ಪ… ನನ್ನ ಅನ್ನದಾತರು, ಅಭಿಮಾನಿಗಳಲ್ಲಿ ನನ್ನದೊಂದು ರಿಕ್ವೆಸ್ಟ್.. ದಯವಿಟ್ಟು ನನಗೆ ಏನೂ ಆಗಿಲ್ಲ. ಆರಾಮಾಗಿರಿ.. ಇನ್ನು ಒಂದು ದಿನ ಆಸ್ಪತ್ರೆಯಲ್ಲಿದ್ದು, ನಾಳೆ ಬರುತ್ತೇನೆ. ಆ ಬಳಿಕ ಎಲ್ಲರಿಗೂ ಸಿಗುತ್ತೇನೆ. ಹೀಗಾಗಿ ದಯವಿಟ್ಟು ಯಾರೂ ಆಸ್ಪತ್ರೆಯತ್ತ ಬರಬೇಡಿ. ಇದೊಂದು ನನ್ನ ಮನವಿ ಅಂತಾನೇ ತಿಳಿದುಕೊಳ್ಳಿ. ಯಾಕಂದ್ರೆ ಬೇರೆ ರೋಗಿಗಳು ಆಸ್ಪತ್ರೆಯಲ್ಲಿದ್ದಾರೆ. ಹೀಗಾಗಿ ಅವರಿಗೆ ತೊಂದರೆಯಾಗುತ್ತದೆ ಎಂಬುದು ನನ್ನ ಭಾವನೆ. ಒಟ್ಟಿನಲ್ಲಿ ಎಲ್ಲರೂ ಆರಾಮಾಗಿರಿ. ನಿಮ್ಮ ದರ್ಶನ್ ಗೆ ಏನೂ ಆಗಿಲ್ಲ.. ಧನ್ಯವಾದ…’ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ- ಪತ್ನಿ ವಿಜಯಲಕ್ಷ್ಮಿ ವಿವರಿಸಿದ್ದು ಹೀಗೆ
Advertisement
Advertisement
ಘಟನೆಯೇನು?:
ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಇಂದು ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿ
Advertisement
ಘಟನೆಯಲ್ಲಿ ದೇವರಾಜ್ ಮತ್ತು ಪ್ರಜ್ವಲ್ ದೇವರಾಜು ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿ ಮುಂಜಾನೆ ಮಳೆಯಾಗುತ್ತಿದ್ದರಿಂದ ರಸ್ತೆ ಸರಿಯಾಗಿ ಕಾಣದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=1Og1WofmDjE
https://www.youtube.com/watch?v=l3g9Cg7z2T0