ಮೈಸೂರು: ಅಪಘಾತದಿಂದಾಗಿ ಬಲಗೈ ಮೂಳೆ ಮುರಿದುಕೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಅಂತ ಆಸ್ಪತ್ರೆಯವರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.
ಕೊಲಂಬಿಯಾ ಏಷಿಯಾ ಆಸ್ಪತ್ರೆಯು ನಟ ದರ್ಶನ್ ಹಾಗೂ ಇತರರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ದರ್ಶನ್ ಅವರ ಬಲಗೈ ಮೂಳೆ ಮುರಿದಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಶಸ್ತ್ರಚಿಕಿತ್ಸೆ ನಡೆಸಿ ದರ್ಶನ್ ಕೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ. ಅಲ್ಲದೇ ಅವರನ್ನು ಶೀಘ್ರವೇ ವಾರ್ಡ್ ಗೆ ಸ್ಥಳಾಂತರಿಸುತ್ತಿರುವುದಾಗಿ ಆಸ್ಪತ್ರೆ ತಿಳಿಸಿದೆ. ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರ್ ಅಪಘಾತ
Advertisement
Advertisement
ಸೋಮವಾರ ಬೆಳಗ್ಗೆ ರಸ್ತೆ ಅಪಘಾತದಲ್ಲಿ ನಟ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ರಾಯ್ ಆಂಥೋನಿ ಎಂಬವರು ಗಾಯಗೊಂಡು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವರಾಜ್ ಅವರಿಗೆ ಎಡ ಬೆರಳುಗಳ ಮೂಳೆ ಮುರಿದಿದ್ದು, ಈಗಾಗಲೇ ಶಸ್ತ್ರಚಿಕಿತ್ಸೆ ನಡೆದಿದೆ. ಅಲ್ಲದೇ ಪ್ರಜ್ವಲ್ ದೇವರಾಜ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಹಾಗೂ ರಾಯ್ ಆಂಥೋನಿ ಎಂಬವರಿಗೆ ಬಲಗೈ ಮೂಳೆ ಮುರಿದಿದ್ದು, ಎಲ್ಲರಿಗೂ ಚಿಕಿತ್ಸೆ ಮುಂದುವರಿದಿದೆ. ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ದೃಢಪಡಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಕಾರ್ ಅಪಘಾತದ ಬಗ್ಗೆ ನಿರ್ಮಾಪಕ ಸಂದೇಶ್ ನಾಗರಾಜ್ ಹೀಗಂದ್ರು
Advertisement
Advertisement
ಈ ಕುರಿತು ಪ್ರತಿಕ್ರಿಯಿಸಿರುವ ವೈದ್ಯ ಡಾ. ಉಪೇಂದ್ರ ಶಣೈ, ದರ್ಶನ್‍ರವರ ಬಲಗೈ ಮೂಳೆ ಮುರಿದಿದ್ದು, ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ಈಗಾಗಲೇ ಶಸ್ತ್ರಚಿಕಿತ್ಸೆ ನಡೆದಿದ್ದು, ಯಾವುದೇ ಪ್ರಾಣಾಪಾಯವಿಲ್ಲ. ಶೀಘ್ರವೇ ಅವರನ್ನು ಶಸ್ತ್ರಚಿಕಿತ್ಸೆಯ ಬಳಿಕ ಐಸಿಯಗೆ ಸ್ಥಳಾಂತರಿಸಲಾಗುತ್ತದೆ. ಒಂದು ದಿನ ಆಸ್ಪತ್ರೆಯಲ್ಲೇ ಅವರು ವಿಶ್ರಾಂತಿ ಪಡೆಯಲಿದ್ದು, ಆರೋಗ್ಯ ಸುಧಾರಿಸಿದ ಮೇಲೆ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಪಘಾತದ ಬಳಿಕ ನಾಪತ್ತೆಯಾಗಿದ್ದ ದರ್ಶನ್ ಕಾರ್ ಪತ್ತೆ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv