Connect with us

Cinema

ದರ್ಶನ್ ನಟನೆಯ ಡಿ53 ಚಿತ್ರದ ಟೈಟಲ್ ಲಾಂಚ್

Published

on

ಬೆಂಗಳೂರು: ಕ್ರಿಸ್‍ಮಸ್ ಹಬ್ಬಕ್ಕೆ ಸ್ಪೆಷಲ್ ಆಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಚಿತ್ರದ ಟೈಟಲ್ ಲಾಂಚ್ ಆಗಿದೆ.

ದರ್ಶನ್ ಅಭಿನಯಿಸುತ್ತಿರುವ ಚಿತ್ರಕ್ಕೆ `ರಾಬರ್ಟ್’ ಟೈಟಲ್ ಫಿಕ್ಸ್ ಮಾಡಿದ್ದು, ಚೌಕ ಸಿನಿಮಾ ಖ್ಯಾತಿಯ ನಿರ್ದೇಶಕ ತರುಣ್ ಸುಧೀರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಹಿಂದೆ `ಡಿ.53′ ಹೆಸರಲ್ಲಿ ಬಿಡುಗಡೆಯಾದ ಥೀಮ್ ಪೋಸ್ಟರ್ ಬಜಾರ್ ನಲ್ಲಿ ಹವಾ ಕ್ರಿಯೇಟ್ ಮಾಡಿಕೊಂಡಿತ್ತು.

`ಈ ಕೈಗೆ ಶಬರಿ ಮುಂದೆ ಸೋಲೋದು ಗೊತ್ತು. ರಾವಣನ ಮುಂದೆ ಗೆಲ್ಲೋದು ಗೊತ್ತು’ ಎನ್ನುವ ಖಡಕ್ ಡೈಲಾಗ್ ಅಭಿಮಾನಿಗಳನ್ನು ಹುಚ್ಚೆಬ್ಬಿಸಿತ್ತು. ಇದೀಗ ಟೈಟಲ್ ಪೋಸ್ಟರ್ ಅಭಿಮಾನಿಗಳಿಗೆ ಅಟ್ರ್ಯಾಕ್ಟ್ ಮಾಡುತ್ತಿದೆ.

ಹನುಮಂತನ ಅವತಾರವೆತ್ತಿರುವ ದಾಸ ರಾಮನನ್ನು ಹೆಗಲ ಮೇಲಿರಿಸಿಕೊಂಡು ನಿಂತಿರುವ ಪೋಸ್ಟರ್ ಅಭಿಮಾನಿಗಳನ್ನು ಥ್ರಿಲ್ಲಾಗುವಂತೆ ಮಾಡಿದೆ. `ರಾಬರ್ಟ್’ ಮಾಸ್ ಎಂಟರ್ ಟೈನರ್ ಚಿತ್ರವಾಗಿದ್ದು, ಫೆಬ್ರವರಿಯಿಂದ ಶೂಟಿಂಗ್ ಶುರುವಾಗಲಿದೆ. ಚಿತ್ರದ ನಾಯಕಿ ಸೇರಿದಂತೆ ಓವರ್ ಆಲ್ ಸ್ಟಾರ್ ಇನ್ನು ಅಂತಿಮವಾಗಿಲ್ಲ

ದರ್ಶನ್ ರಾಬರ್ಟ್ ಚಿತ್ರದ ಪೋಸ್ಟರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಾಕಿ ಅದಕ್ಕೆ, “ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ #ಡಿ53 ಚಿತ್ರಕ್ಕೆ `ರಾಬರ್ಟ್’ ಎಂಬ ಶೀರ್ಷಿಕೆ ಅಂತಿಮಗೊಳಿಸಲಾಗಿದೆ. ಉಮಾಪತಿ ಫಿಲ್ಮ್ ಬ್ಯಾನರ್ ಅಡಿಯಲ್ಲಿ, ತರುಣ್ ಕಿಶೋರ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. 2019 ರಿಂದ ಚಿತ್ರದ ಶೂಟಿಂಗ್ ಶುರುವಾಗಲಿದೆ” ಎಂದು ದರ್ಶನ್ ತಮ್ಮ ಅಭಿಮಾನಿಗಳಿಗೆ ತಿಳಿಸಿ ಎಲ್ಲಾ ಕ್ರೈಸ್ತ ಭಾಂದವರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳು ತಿಳಿಸಿ ಟ್ವೀಟ್ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv