ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯಕ್ಕೆ ಎಂಟ್ರಿಯಾಗಿ ತಮ್ಮದೇ ಸ್ವಂತ ಪಕ್ಷ ನಿರ್ಮಿಸ್ತಿರೋ ಹೊತ್ತಲ್ಲೇ ನಟ ದರ್ಶನ್ ಕೂಡ ರಾಜಕೀಯಕ್ಕೆ ಬರ್ತಾರೆ ಅನ್ನೋ ಚರ್ಚೆ ಶುರುವಾಗಿದೆ.
ಇದನ್ನೂ ಓದಿ: ದರ್ಶನ್‍ಗೆ ಶುಭ ಹಾರೈಸಿದ ಸುದೀಪ್
Advertisement
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇತರೆ ಸ್ಟಾರ್ ನಟರನ್ನು ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ಕಸರತ್ತು ಆರಂಭಿಸಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಅಂಬರೀಶ್ ಪ್ರಯತ್ನ ಆರಂಭಿಸಿದ್ದು, ಈಗಾಗಲೇ ಹೈಕಮಾಂಡ್ ಮಟ್ಟದಲ್ಲೂ ಒಂದು ಸುತ್ತಿನ ಮಾತುಕತೆಯಾಗಿದೆ.
Advertisement
ಇದನ್ನೂ ಓದಿ: ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದರ್ಶನ್-ಅಭಿಮಾನಿಗಳು ಫುಲ್ ಖುಷ್
Advertisement
ಎಲ್ಲಾ ಲೆಕ್ಕಾಚಾರದಂತೆ ನಡೆದಲ್ಲಿ 2018ರ ವಿಧಾನಸಭೆ ಚುನಾವಣೆಯಲ್ಲಿ ದರ್ಶನ್ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ. ಆದ್ರೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ದರ್ಶನ್ ಕಣಕ್ಕಿಳಿಯುವ ಸಾಧ್ಯತೆ ಕಡಿಮೆ ಇದೆ. ಯಾಕಂದ್ರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಎದುರಾಳಿಯಾಗಿ ದರ್ಶನ್‍ರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತಿಸಿದೆ ಎನ್ನಲಾಗಿದೆ.
Advertisement
ಇದನ್ನೂ ಓದಿ: `ಕೈ’ ಬಿಟ್ಟ ಹಳ್ಳಿ ಹಕ್ಕಿ! – ಸಿಂಹಗೆ ಎದುರಾಗ್ತಾರಾ ಬ್ರಿಜೇಶ್?