ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಇಂದು ನಡೆದ ಶರಣ ಸಂಸ್ಕೃತಿ ಉತ್ಸವದ ಜಾಗೃತಿ ನಡಿಗೆಗೆ ರಾಕ್‍ಲೈನ್ ವೆಂಕಟೇಶ್ ಹಾಗೂ ದರ್ಶನ್ ಚಾಲನೆ ನೀಡಿದ್ದಾರೆ. ಮುರುಘಾಮಠದ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಸೌಹಾರ್ದ ನಡಿಗೆ ಪಾರಿವಾಳ ಹಾರಿಬಿಡುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದ್ದಾರೆ.
ಮುರುಘಾಮಠಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಿದರು. ದರ್ಶನ್ ಮಠಕ್ಕೆ ಬರುತ್ತಿದ್ದಂತೆ ಮಠದ ಆನೆ ಬಗ್ಗೆ ವಿಚಾರಿಸಿದ್ದಾರೆ. ಅಲ್ಲದೇ ಆನೆಯ ಆರೋಗ್ಯದ ಬಗ್ಗೆಯೂ ವಿಚಾರಿಸಿ ತಿಂಡಿ ಏನು ಕೊಟ್ಟಿದ್ದೀರಿ ಎಂದು ಮಾವುತರಿಗೆ ಕೇಳಿದ್ದಾರೆ. ಅಷ್ಟೇ ಅಲ್ಲದೇ ಆನೆಯ ದಂತವನ್ನು ಕೈಯಿಂದ ಮುಟ್ಟಿ ನೋಡಿ ಚೆನ್ನಾಗಿದೆ ಹೇಳಿದರು. ಈ ವೇಳೆ ದರ್ಶನ್ ಅಭಿಮಾನಿಯೊಬ್ಬರ ಮೇಲೆ ಗರಂ ಆದರು. ಗಲಾಟೆ ಮಾಡಬಾರದು ಆವಾಗಿನಿಂದ ನಿನ್ನದೇ ಗಲಾಟೆ ಎಂದು ಹೇಳಿ ಖಡಕ್ ವಾರ್ನಿಂಗ್ ಕೊಟ್ಟರು.
Advertisement
Advertisement
ನಗರದ ಗಾಂಧಿ ವೃತ್ತದಿಂದ ಮುರುಘಾ ಮಠದವರೆಗೆ ಜಾಥಾ ಆರಂಭವಾಗಿದ್ದು, ದರ್ಶನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಾಲನೆ ನೀಡಿದರು. ಸದ್ಯ ದರ್ಶನ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದು, ಅಭಿಮಾನಿಗಳನ್ನು ಚದುರಿಸಲು ಪೊಲೀಸರಿಂದ ಹರಸಾಹಸಪಟ್ಟರು. ದರ್ಶನ್ ಹಾಗೂ ರಾಕ್‍ಲೈನ್ ವೆಂಕಟೇಶ್ ಅವರಿಗೆ ಡಾ. ಶಿವಮೂರ್ತಿ ಮುರುಘಾ ಶರಣರು ಸಾಥ್ ನೀಡಿದ್ದಾರೆ.
Advertisement
Advertisement
ಶರಣ ಸಂಸ್ಕೃತಿ ಉತ್ಸವದ ಜಾಗೃತಿ ನಡಿಗೆಗೆ ಚಾಲನೆ ನೀಡುವ ಮುನ್ನ ಮಾತನಾಡಿದ ರಾಕ್‍ಲೈನ್ ವೆಂಕಟೇಶ್ ಅವರು, ದಸರಾ ಆಚರಣೆ ಮಾಡಲು ಬಂದಿದ್ದೇವೆ, ದಸರಾ ಹಬ್ಬ ಮಾಡೋಣ. ಹಬ್ಬ ಆಚರಿಸಲು ನಮ್ಮನ್ನು ಮುರುಘಾ ಶರಣರು ಕರೆಸಿದ್ದಾರೆ. ಹೀಗಾಗಿ ಚಿತ್ರದ ಬಗ್ಗೆ ಮಾತನಾಡುವುದು ಬೇಡ ವೀರ ಮದಕರಿ ಚಿತ್ರದ ಬಗ್ಗೆ ಮಾತನಾಡಲು ಪ್ರತ್ಯೇಕ ವೇದಿಕೆ ಸೃಷ್ಟಿಸುತ್ತೇವೆ. ಈಗ ಚಿತ್ರದುರ್ಗ ಹಾಗು ಚಿತ್ರದ ಬಗ್ಗೆ ಮಾತನಾಡುವುದು ಸರಿಯಲ್ಲ ಅಂತಾ ತಿಳಿಸಿದ್ರು.
ಇದೇ ವೇಳೆ ರಾಕ್‍ಲೈನ್ ವೆಂಕಟೇಶ್ ಅವರು ಮಾಧ್ಯಮಗಳ ಮುಂದೆ ಮಾತನಾಡದೇ ದರ್ಶನ್ ಅವರು ಕೂಡ ದಸರಾ ಹಬ್ಬದ ಶುಭಾಶಯ ತಿಳಿಸಿ ಅಲ್ಲಿಂದ ಹೊರಟು ಹೋದರು. ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟರಾದ ದೊಡ್ಡಣ್ಣ, ಶ್ರೀನಿವಾಸ ಮೂರ್ತಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv