ಕೇಂದ್ರದಿಂದ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ: ಚಲುವರಾಯಸ್ವಾಮಿ

Public TV
2 Min Read
N chaluvarayaswamy

ಬೆಂಗಳೂರು: ಕೇಂದ್ರ ಸರ್ಕಾರದಿಂದ (Central Government) ಯೂರಿಯಾ ಪೂರೈಕೆಯಲ್ಲಿ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N Chaluvarayaswamy) ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ 3 ಮುಂಗಾರು ಹಂಗಾಮಿನಲ್ಲಿ ಇದೇ ಸರ್ಕಾರ ಅಧಿಕಾರದಲ್ಲಿದೆ. ನಾನೇ ಕೃಷಿ ಸಚಿವನಾಗಿ ಇದ್ದೇನೆ. ಈವರೆಗೆ ಉಂಟಾಗದ ಸಮಸ್ಯೆ ಈಗೇಕೆ ಎಂಬುದನ್ನು ವಿಶ್ಲೇಷಿಸಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ಜೋಶಿ ಮನವಿ

ರಾಜ್ಯಕ್ಕೆ ಪೂರೈಕೆಯಾಗಬೇಕಾಗಿದ್ದ ಯೂರಿಯಾ ರಸಗೊಬ್ಬರದಲ್ಲಿ ಈ ಬಾರಿ 1.36 ಲಕ್ಷ ಮೆಟ್ರಿಕ್ ಟನ್ ಕೊರತೆಯಾಗಿದೆ. ಇದೇ ಈ ಎಲ್ಲಾ ಸಮಸ್ಯೆ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ನ್ಯಾ. ವರ್ಮಾ ನಡೆ ವಿಶ್ವಾಸ ಮೂಡಿಸುವುದಿಲ್ಲ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಈ ಬಾರಿ ಮುಂಗಾರು ಬೇಗ ಪ್ರಾರಂಭವಾಗಿ ಉತ್ತಮ ಮಳೆಯಾಗಿದ್ದು, 2 ಲಕ್ಷ ಹೆಕ್ಟೇರ್ ಹೆಚ್ಚುವರಿ ಮುಸುಕಿನ ಜೋಳ ಬಿತ್ತನೆ ಕೂಡ ಯೂರಿಯಾ ಬೇಡಿಕೆಯ ಹಠಾತ್ ಏರಿಕೆಗೆ ಕಾರಣವಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಅಕ್ರಮ ಸಾಗಾಟ, ಯೂರಿಯಾ (Urea) ದುರ್ಬಳಕೆ ಬಗ್ಗೆ ವಿಲಕ್ಷಣ ದಳ ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದು, ಅಕ್ರಮಗಳಿಗೆ ಕಡಿವಾಣ ಹಾಕಿದೆ. ವಿರೋಧ ಪಕ್ಷದ ಮುಖಂಡರು ಮಾಧ್ಯಮಕ್ಕೆ ತಿಳಿಸಿರುವಂತೆ ಕರ್ನಾಟಕ ರಾಜ್ಯವು ನೆರೆ ದೇಶಗಳಾದ ಶ್ರೀಲಂಕಾ ಮತ್ತು ಬಾಂಗ್ಲಾದೇಶದೊಂದಿಗೆ ಯಾವುದೇ ಗಡಿಯನ್ನು ಹಂಚಿಕೊಂಡಿರುವುದಿಲ್ಲ. ಈ ಹೇಳಿಕೆಯು ಹಾಸ್ಯಾಸ್ಪದವಾಗಿದೆ. ವಿರೋಧ ಪಕ್ಷದ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ಮೇಲೆ ಟ್ರಂಪ್‌ ತೆರಿಗೆ ಸಮರ : ಆ.1 ರಿಂದಲೇ 25% ಸುಂಕ

ರಸಗೊಬ್ಬರಗಳ ಪೂರೈಕೆ ಕಾಪು ದಾಸ್ತಾನಿಗೆ ಇರಿಸಲಾಗಿದ್ದ ಗ್ಯಾರಂಟಿ ಹಣ ಕಡಿತಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಆದರೆ ಈ ಹಿಂದೆ ಇದ್ದದ್ದು ಬಿಜೆಪಿ ಸರ್ಕಾರ, ಅವರೇ ನಿಗದಿಪಡಿಸಿದ್ದ 400 ಕೋಟಿ ರೂ. ಹಣವನ್ನು ನಾವು ಯಥಾಸ್ಥಿತಿಯಲ್ಲಿ ಮುಂದುವರೆಸಿದ್ದೇವೆ. ಇನ್ನೂ 600 ಕೋಟಿ ರೂ. ಹೆಚ್ಚುವರಿ ಹಣ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ. ಪ್ರತಿಯಾಗಿ ಬಿಜೆಪಿ ನಾಯಕರು ಗೊಬ್ಬರ ಒದಗಿಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ದಾವಣಗೆರೆ, ಗದಗ, ಕೊಪ್ಪಳ, ಧಾರವಾಡ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಯೂರಿಯಾ ಕೊರತೆ ಸ್ವಲ್ಪ ಕಂಡುಬಂದಿರುವುದು ನಿಜ. ಆದರೆ ಅದನ್ನು ನಿಭಾಯಿಸಲಾಗುತ್ತಿದೆ. ಹೆಚ್ಚುವರಿ ದಾಸ್ತಾನು ಬೇರೆ ಜಿಲ್ಲೆಗಳಿಂದ ವರ್ಗಾವಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ದೀಪಾವಳಿ ಧಮಾಕ, ಕಾಂಗ್ರೆಸ್‌ನಲ್ಲಿ ಕ್ರಾಂತಿ : ವಿಜಯೇಂದ್ರ

ರಸಗೊಬ್ಬರ ಅದರಲ್ಲೂ ಮುಖ್ಯವಾಗಿ ಯೂರಿಯಾ ಮತ್ತು ಡಿಎಪಿ ಪೂರೈಕೆ ಕೋರಿ ಜುಲೈ 7ರಂದು ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಆ ನಂತರ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸಹ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಲಾಗಿದೆ ಎಂದಿದ್ದಾರೆ.

ಕೇಂದ್ರ ರಸಗೊಬ್ಬರ ಖಾತೆ ಸಚಿವರ ಭೇಟಿಗಾಗಿ ಸಮಯಾವಕಾಶ ಕೋರಿ ಪತ್ರ ಬರೆಯಲಾಗಿದೆ. ಅವಕಾಶ ಸಿಕ್ಕರೆ ಭೇಟಿ ಮಾಡಿ, ರಾಜ್ಯದ ಪರಿಸ್ಥಿತಿ ವಿವರಿಸಿ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

Share This Article