ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಕುಂದಕೆರೆವಲಯದ ಕಣಿಯನಪುರದ ಬೀಟ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯಿಂದ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಹೋಗಿದೆ.
ಗುರುವಾರ ಮಧ್ಯಾಹ್ನ 2.30 ರ ವೇಳೆಗೆ ಕಾಡಿನ ಪಕ್ಕದ ಜಮೀನಿನೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದಾದ ಬಳಿಕ ಕಣಿಯನಪುರದ ಬೀಟ್‍ಗೆ ಬೆಂಕಿ ಬಿದ್ದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯ ಗ್ರಾಮಸ್ಥರು ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಕಾಡಿನ ಪಕ್ಕದ ಜಮೀನಿನಲ್ಲಿ ಮೊದಲು ಕಾಣಿಸಿಕೊಂಡ ಬೆಂಕಿ ಕಣಿಯನಪುರದ ಬೀಟ್ ಪ್ರದೇಶಕ್ಕೂ ಆವರಿಸಿದೆ.
Advertisement
Advertisement
ಬೆಟ್ಟದ ಪ್ರದೇಶದಲ್ಲಿ ಬೆಂಕಿ ಬಿದ್ದಿರುವ ಕಾರಣ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. 15 ದಿನಗಳ ಹಿಂದೆಯಷ್ಟೇ ಬಂಡೀಪುರ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡು 15 ಸಾವಿರ ಎಕರೆಗೂ ಅಧಿಕ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿತ್ತು. ಇದನ್ನೂ ಓದಿ; ಕಾಡು ಪ್ರಾಣಿಗಳಿಗೆ ಬೇಸತ್ತು ಬಂಡೀಪುರಕ್ಕೆ ಬೆಂಕಿ
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv