ಚಾಮರಾಜನಗರ: ಪರಿಸರ ರಕ್ಷಣೆಗಾಗಿ ದೀಪಾವಳಿ ಹಬ್ಬದ ದಿನ ಪಟಾಕಿ ಸಿಡಿಸಲ್ಲ ಎಂದು ಚಾಮರಾಜನಗರದ ಸರ್ಕಾರಿ ಶಾಲೆಯೊಂದರ ಮಕ್ಕಳು ಪ್ರತಿಜ್ಞೆ ಮಾಡಿದ್ದಾರೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊಂಗಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳು ದೀಪಾವಳಿ ಹಬ್ಬದ ಪಟಾಕಿ ಸಂಭ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಹಬ್ಬದಂದು ಪಟಾಕಿ ಸಿಡಿಸುವುದರ ಬದಲು ಪರಿಸರ ಉಳಿಸಲು ಗಿಡ ನೆಡಲು ಮನಸ್ಸು ಮಾಡಿದ್ದಾರೆ.
Advertisement
Advertisement
ಈ ನಿಟ್ಟಿನಲ್ಲಿ ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸದೆ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಾಡುತ್ತೇವೆ ಎಂದು ಪುಟಾಣಿಗಳು ಪ್ರತಿಜ್ಞೆ ಮಾಡಿದ್ದಾರೆ. ಶಾಲಾ ಮಕ್ಕಳ ಈ ನಡೆಗೆ ಪರಿಸರ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.