ಚಾಮರಾಜನಗರ: ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಾಕಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಚಾಮರಾಜನಗರ ತಾಲೂಕಿನ ಕಾವುದವಾಡಿಯ ಲೋಕೇಶ್, ನಂಜನಗೂಡು ತಾಲೂಕಿನ ನೀಲಕಂಠ ನಗರದ ನಾಗೇಂದ್ರ ಬಂಧಿತರು. ಆರೋಪಿಗಳು ಓರ್ವ ಯುವಕ ಮತ್ತು ಯುವತಿಗೆ ಕೊರೊನಾ ಬಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದರು. ಇದನ್ನು ಓದಿ: ಕೊರೊನಾ ವೈರಸ್ಗೆ ದೇಶದಲ್ಲಿ ಎರಡನೇ ಬಲಿ
ಸುಳ್ಳು ಸುದ್ದಿ ಹಬ್ಬಿಸುತ್ತಿದ್ದವರ ಬಂಧಿಸುವಂತೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ಡಿಎಚ್ಒ ಡಾ.ರವಿ ದೂರು ನೀಡಿದ್ದರು. ದೂರು ದಾಖಲಾದ ನಂತರ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಂಡ್ಲುಪೇಟೆ ಮತ್ತು ಚಾಮರಾಜನಗರ ಠಾಣಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಸಂಬಂಧ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.