Connect with us

ಬುದ್ಧಿಮಾಂದ್ಯ ಮಕ್ಕಳ ಶಾಲೆಗೆ ಭುವನ್, ಹರ್ಷಿಕಾ ನೆರವು

ಬುದ್ಧಿಮಾಂದ್ಯ ಮಕ್ಕಳ ಶಾಲೆಗೆ ಭುವನ್, ಹರ್ಷಿಕಾ ನೆರವು

ಚಾಮರಾಜನಗರ: ಗುಂಡ್ಲುಪೇಟೆ ಬುದ್ಧಿಮಾಂದ್ಯ ಮಕ್ಕಳಿಗೆ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ನೆರವಿನ ಹಸ್ತ ಚಾಚಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿರುವ ಪೃಥ್ವಿ ಬುದ್ಧಿಮಾಂಧ್ಯ ಮಕ್ಕಳ ವಸತಿ ಶಾಲೆಯ ವಿಧ್ಯಾರ್ಥಿಗಳು ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದ ಪರಿಸ್ಥಿತಿ ಇತ್ತು. 30ಕ್ಕೂ ಹೆಚ್ಚು ಬುದ್ಧಿಮಾಂದ್ಯ ಮಕ್ಕಳಿರುವ ವಸತಿ ಶಾಲೆ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ, ಮಳೆ ಬಂದರೆ ಸೋರುವ ಶಾಲೆಯಾಗಿತ್ತು.

ಗುಂಡ್ಲುಪೇಟೆಗೆ ತೆರಳಿ ಬುದ್ಧಿಮಾಂದ್ಯ ಮಕ್ಕಳಿಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಭುವನಂ ಫೌಂಡೇಷನ್ ನಿಂದ ಎರಡು ತಿಂಗಳಿಗೆ ಆಗುವಷ್ಟು ಆಹಾರಧಾನ್ಯ, ನಿತ್ಯೋಪಯೋಗಿ ವಸ್ತುಗಳ ವಿತರಣೆ ಮಾಡಿದ್ದಾರೆ. ಇದನ್ನೂ ಓದಿ: ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಗೆ ಯಶ್ ಸಹಾಯ ಹಸ್ತ

ಬುದ್ಧಿಮಾಂದ್ಯ ಮಕ್ಕಳೊಡನೆ ಕೆಲಕಾಲ ಕಳೆದಿರುವ ನಟ, ನಟಿ ತಾವೂ ನೃತ್ಯ ಮಾಡಿ ಅಲ್ಲದೆ ಅವರಿಂದಲೂ ನೃತ್ಯ ಮಾಡಿಸಿ ರಂಜಿಸಿದ್ದಾರೆ. ಇಲ್ಲಿನ ಬುದ್ಧಿಮಾಂದ್ಯ ಮಕ್ಕಳ ಪರಿಸ್ಥಿತಿ ಶೋಚನೀಯವಾಗಿದೆ. ಸದ್ಯಕ್ಕೆ ತಾತ್ಕಾಲಿಕ ನೆರವು ನೀಡಿದ್ದೇವೆ. ನಮ್ಮ ಸೇವೆಗೆ ಉತ್ತಮ ಅವಕಾಶ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಶಾಲೆಗೆ ಇನ್ನೂ ಹೆಚ್ಚಿನ ನೆರವು ನೀಡೋದಾಗಿ ಭರವಸೆ ಕೊಟ್ಟಿದ್ದಾರೆ. ಇದನ್ನೂ ಓದಿ: ವಿಶೇಷ ಚೇತನ ಮಕ್ಕಳ ಶಾಲೆಯ ನೆರವಿಗೆ ನಿಂತ ನಟ ಸುದೀಪ್

ನಿನ್ನೆಯಷ್ಟೇ ಕಿಚ್ಚ ಸುದೀಪ್ ಚಾರಿಟಬಲ್ ಸೊಸೈಟಿ ಸಹ ನೆರವು ನೀಡಿತ್ತು. ಬುದ್ಧಿಮಾಂದ್ಯ ಮಕ್ಕಳ ಶಾಲೆಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆ ಕೊಟ್ಟಿದ್ದಾರೆ.

Advertisement
Advertisement