ಚಾಮರಾಜನಗರ: ಮಾರ್ಚ್ 4 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಬಸ್‍ಗಳ ಮೂಲಕ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಬಸ್ ಪಾಸ್ ತೋರಿಸುವಂತೆ ಒತ್ತಡ ಹಾಕಬಾರದು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಡಾ ಎಂ.ಆರ್ ರವಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಿಯುಸಿ ಪರೀಕ್ಷೆ ಸಂಬಂಧ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿದರೆ ಸಾಕು, ಅವರು ಪರೀಕ್ಷಾ ಕೇಂದ್ರಗಳಿರುವ ಸ್ಥಳಗಳಿಗೆ ಉಚಿತವಾಗಿ ಪ್ರಯಾಣಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
Advertisement
Advertisement
ಪರೀಕ್ಷಾ ಕೇಂದ್ರಗಳಿಗೆ ಕಿರಿಯ ವೈದ್ಯರು ಹಾಗೂ ಮಹಿಳಾ ಶುಶ್ರೂಕಿಯರನ್ನು ನಿಯೋಜಿಸಲಾಗುವುದು. ಅಲ್ಲದೆ ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಗೋಡೆ ಗಡಿಯಾರವನ್ನು ಅಳವಡಿಸುವಂತೆ ಮುಖ್ಯ ಅಧೀಕ್ಷರಿಗೆ ಸೂಚಿಸಲಾಗಿದೆ ಎಂದರು.
Advertisement
ಇದೇ ವೇಳೆ ಚಾಮರಾಜನಗರ ಜಿಲ್ಲೆಯಲ್ಲಿ 16 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 6894 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.