ಚಾಮರಾಜನಗರ: ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ವೈದ್ಯರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ಪರಿಣಾಮ ಏಳು ದಿನದಲ್ಲೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ಚಾಮರಾಜನಗರ ತಾಲೂಕಿನ ಆಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಅಭಯ್ ಕುಮಾರ್ ಸಾವನ್ನಪ್ಪಿದ್ದಾರೆ. ಮೃತ ವೈದ್ಯರಿಗೆ 7 ದಿನದ ಹಿಂದೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಸ್ಫೋಟ – ಒಂದೇ ದಿನ 25 ಸಾವಿರ ಮಂದಿಗೆ ಸೋಂಕು
ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ನಂತರ ಮತ್ತೆ ಆರೋಗ್ಯ ಹದಗೆಟ್ಟ ಹಿನ್ನೆಲೆ ಚಾಮರಾಜನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಚಿಕಿತ್ಸೆ ಫಲಕಾರಿಯಾಗದೇ ಅಭಯ್ ಕುಮಾರ್ ಸಾವನ್ನಪ್ಪಿದ್ದು, ಮೆದುಳಿಗೆ ಸಂಬಂಧಿಸಿದ ಕಾಯಿಲೆ ಹೊಂದಿದ್ದರು ಎಂದು ತಿಳಿದು ಬಂದಿದೆ. ವೈದ್ಯರ ಸಾವಿಗೆ ಕುಟುಂಬಸ್ಥರು ಸೇರಿದಂತೆ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮೋದಿಗೆ ವಿವರಿಸಿದ ಬೊಮ್ಮಾಯಿ