ಚಾಮರಾಜನಗರ: ಕೋವಿಡ್-19 ಹೊರತುಪಡಿಸಿ ಉಳಿದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಅನುಕೂಲಕ್ಕಾಗಿ ಚಾಮರಾಜನಗರದಲ್ಲಿ ಟೆಲಿ ಮೆಡಿಸಿನ್ ಸೇವೆ ಆರಂಭಿಸಲಾಗಿದೆ.
ಇದಕ್ಕಾಗಿ ಜಿಲ್ಲೆಯ ಹನೂರು, ಬೇಗೂರು, ಸಂತೇಮಾರಹಳ್ಳಿ, ಕೊಳ್ಳೇಗಾಲ, ಯಳಂದೂರು ಹಾಗೂ ಗುಂಡ್ಲುಪೇಟೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸೇವಾ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿರುವ ಹೃದ್ರೋಗ, ಮಧುಮೇಹ, ಚರ್ಮರೋಗ, ಸ್ತ್ರೀ ರೋಗ ಹಾಗೂ ಮಕ್ಕಳ ತಜ್ಞರು ಟೆಲಿ ಮೆಡಿಸಿನ್ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
Advertisement
Advertisement
ಲಾಕ್‍ಡೌನ್ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ಬರಲು ಸಾಧ್ಯವಾಗದೆ ಇರುವವರು ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಸ್ಪತ್ರೆಯಲ್ಲಿರುವ ತಜ್ಞರು ಹಾಗೂ ವೈದ್ಯರನ್ನು ಸಂಪರ್ಕಿಸಲು ವ್ಯವಸ್ಥೆ ಮಾಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರೋಗಿಯ ಗುಣಲಕ್ಷಣಗಳನ್ನು ತಿಳಿದುಕೊಳ್ಳುವ ಜಿಲ್ಲಾಸ್ಪತ್ರೆಯಲ್ಲಿರುವ ತಜ್ಞರು ಹಾಗೂ ವೈದ್ಯರು ಸೇವಾ ಕೇಂದ್ರದಲ್ಲಿರುವ ವೈದ್ಯರೊಂದಿಗೆ ಸಮಾಲೋಚಿಸಿ, ಯಾವ ಚಿಕಿತ್ಸೆ ನೀಡಬೇಕು ಎನ್ನುವುದನ್ನು ತಿಳಿಸುತ್ತಾರೆ.