ಚಾಮರಾಜನಗರ: ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಕೂಡ ಸ್ಯಾನಿಟೈಸರ್, ಸೋಪ್ ಹಾಗೂ ಕೈ ತೊಳೆಯಲು ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಡೀ ವಿಶ್ವವನ್ನೇ ಕಾಡ್ತಿರುವ ಕೊರೊನಾ ಭೀತಿ ಇದೀಗ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಕೂಡ ಕಾಡ್ತಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಸಚಿವರು, ಒಂದು ರೂಂನಲ್ಲಿ ಕಡಿಮೆ ಮಕ್ಕಳನ್ನು ಕೂರಿಸಿ ಪರೀಕ್ಷೆ ಬರೆಸಲಾಗುತ್ತದೆ. ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗೆ ಅಂತರ ಕಾಯ್ದುಕೊಳ್ಳಲಾಗುತ್ತೆ ಎಂದರು.
Advertisement
Advertisement
ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಕೂಡ ಸ್ಯಾನಿಟೈಸರ್, ಸೋಪ್ ಹಾಗೂ ಕೈ ತೊಳೆಯಲು ನೀರಿನ ವ್ಯವಸ್ಥೆ ಮಾಡಲಾಗಿದೆ. ಯಾರಿಗಾದರೂ ಸಮಸ್ಯೆ ಇದ್ದರೆ ಮಾಸ್ಕ್ ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿದ್ದಾರೆ. ತುಂಬಾ ತೊಂದರೆಯಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿದ್ದೇವೆ ಎಂದು ತಿಳಿಸಿದರು.
Advertisement
Advertisement
ಪರೀಕ್ಷೆ ಮುಗಿದ ನಂತರ ಮಕ್ಕಳು ಗುಂಪು ಗುಂಪಾಗಿ ಮಕ್ಕಳನ್ನು ಬಿಡುವುದಿಲ್ಲ. ಒಂದು ಕೊಠಡಿ ನಂತರ ಮತ್ತೊಂದು ಕೊಠಡಿಯ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಯಿಂದ ಹೊರ ಕಳುಹಿಸಲಾಗುತ್ತದೆ. ಪರೀಕ್ಷೆ ನಡೆಸಬೇಕು? ಬೇಡ್ವೋ ಅನ್ನೋ ಕುರಿತು ಮಕ್ಕಳ ಜೊತೆ ಸಮಾಲೋಚನೆ ನಡೆಸಿದ್ದೇನೆ. ಎಲ್ಲರೂ ಕೂಡ ಪರೀಕ್ಷೆ ಬೇಕೆ ಬೇಕು ಎಂದು ಕೇಳಿಕೊಂಡಿದ್ದಾರೆಂದು ಸಚಿವರು ಹೇಳಿದರು.