ಚಾಮರಾಜನಗರ: ಮಾಜಿ ಸಚಿವ ಜಿ.ಟಿ.ದೇವೇಗೌಡ ತಮಗಾದ ನೋವನ್ನು ತೋಡಿಕೊಂಡಿದ್ದಾರೆ ಅಷ್ಟೇ. ಪಕ್ಷದ ವರಿಷ್ಠರು ಶೀಘ್ರದಲ್ಲೇ ಅವರೊಡನೆ ಮಾತುಕತೆ ನಡೆಸಿ ಎಲ್ಲವನ್ನೂ ಸರಿಪಡಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಾಕಷ್ಟು ಮಂದಿ ಶಾಸಕರಿಗೆ ನೋವು, ಭಿನ್ನಾಭಿಪ್ರಾಯಗಳಿರುತ್ತವೆ ಅವಕಾಶ ಸಿಕ್ಕಾಗ ಹೊರಹಾಕುತ್ತಾರೆ. ಇದು ಜೆಡಿಎಸ್ ನಲ್ಲಿರುವ ಆಂತರಿಕ ಪ್ರಜಾಪ್ರಭುತ್ವಕ್ಕೆ ಸಾಕ್ಷಿ ಎಂದು ಜಿಟಿಡಿ ನಡೆಯನ್ನು ಸಮರ್ಥಿಸಿಕೊಂಡರು.
ಅನರ್ಹ ಶಾಸಕರ ಪರಿಸ್ಥಿತಿ ಎಲ್ಲರಿಗೂ ಅರ್ಥವಾಗಿದೆ. ಹಾಗಾಗಿ ಯಾವುದೇ ಶಾಸಕರೂ ಪಕ್ಷ ಬಿಡುವ ಮನಸ್ಸು ಮಾಡುವುದಿಲ್ಲ ಎಂದು ಶ್ರೀಕಂಠೇಗೌಡ ಹೇಳಿದರು. ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಪದೇ ಪದೇ ಅಘಾತವಾಗುತ್ತಿದೆ. ಐಎಎಸ್ ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಲು ಅವಕಾಶವಿರುವಾಗ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ತಾರತಮ್ಯವೇಕೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.