ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Temple) ದೀಪಾವಳಿ (Diwali) ಜಾತ್ರೆಯ ಎರಡನೇ ದಿನವಾದ ಇಂದು ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಸಮುದಾಯಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆಹಳ್ಳದಿಂದ ಬರಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡಿದರು.
ಬೇಡಗಂಪಣ ಜನಾಂಗದ ಹನ್ನೊಂದು ವರ್ಷದೊಳಗಿನ 101 ಹೆಣ್ಣುಮಕ್ಕಳು ಉಪವಾಸವಿದ್ದು, ಹಾಲಹಳ್ಳಕ್ಕೆ ಬಂದು ಸ್ನಾನ ಮಾಡಿ ಹಳ್ಳದಲ್ಲಿ ಹರಿಯುವ ನೀರು ಹೊತ್ತು ತಂದರು. ಬರಿಗಾಲಲ್ಲಿ ಒಂಬತ್ತು ಕಿ.ಮೀ ಬೆಟ್ಟ, ಗುಡ್ಡ ಹತ್ತಿ ಬಂದ ಇವರನ್ನು ಮಂಗಳವಾದ್ಯ ಸಮೇತ ದೇವಸ್ಥಾನಕ್ಕೆ ಕರೆದೊಯ್ದು ಬಾಲೆಯರು ಕುಂಭದಲ್ಲಿ ತಂದ ನೀರನ್ನು ಮಹದೇಶ್ವರನಿಗೆ ಅಭಿಷೇಕ ಮಾಡಲಾಯಿತು. ಇದನ್ನೂ ಓದಿ: ಮೌಢ್ಯಕ್ಕೆ ಸೆಡ್ಡು – ಗ್ರಹಣ ವೇಳೆ ಬಾಳೆಹಣ್ಣು, ಚುರುಮುರಿ ಸೇವಿಸಿದ ಜನ
Advertisement
Advertisement
ಬಳಿಕ ಅಭಿಷೇಕದ ನೀರನ್ನು ಭಕ್ತರಿಗೆ ತೀರ್ಥ ರೂಪದಲ್ಲಿ ನೀಡಲಾಯಿತು. ಈ ತೀರ್ಥ ಸ್ವೀಕರಿಸಲು ಸಾವಿರಾರು ಭಕ್ತರು ಸಾಲುಗಟ್ಟಿ ನಿಂತಿದ್ದರು. ಇನ್ನೂ ಸೂರ್ಯ ಗ್ರಹಣದ (Solar Eclipse) ನಡುವೆಯೂ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದನ್ನೂ ಓದಿ: ಸಿಲಿಂಡರ್ ಸ್ಫೋಟ ಪ್ರಕರಣ ಆತ್ಮಹತ್ಯಾ ದಾಳಿಯೆಂದು ಪರಿಗಣಿಸಿ NIA ತನಿಖೆಗೆ ವಹಿಸಿ – ಅಣ್ಣಾಮಲೈ