ಚಾಮರಾಜನಗರ: ಗಾಳೀಪುರ ಸಮೀಪದ ರಿಂಗ್ ರಸ್ತೆಯಲ್ಲಿ ಸಂಭವಿಸಿದ್ದ ಲಾರಿ, ಕಾರು ಹಾಗೂ ಮೊಪೆಡ್ ನಡುವಿನ ಸರಣಿ ಅಪಘಾತದಲ್ಲಿ (Accident) ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮೊಪೆಡ್ ನಲ್ಲಿ ಹೋಗುತ್ತಿದ್ದ ನಾಲ್ವರ ಪೈಕಿ ಸ್ಥಳದಲ್ಲೇ ಮೆರಾನ್ ಎಂಬ ಬಾಲಕ ಸಾವನ್ನಪ್ಪಿದ್ದ. ಗಂಭೀರವಾಗಿ ಗಾಯಗೊಂಡಿದ್ದ ರೆಹಾನ್, ಆದಾನ್ ಪಾಷಾ, ಫೈಜಲ್ ಎಂಬ ಬಾಲಕರನ್ನು ಸಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೂವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Bidar | ಶಾಲಾ ಬಸ್ ಹರಿದು 6ರ ಬಾಲಕಿ ದಾರುಣ ಸಾವು
ಈ ಸಂಬಂಧ ಚಾಮರಾಜನಗರ (Chamarajanagar) ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಮುಂಬೈ ಪೊಲೀಸರ ದಾಳಿ – 12,000 ಕೋಟಿ ಮೌಲ್ಯದ ಮಾದಕ ವಸ್ತು ವಶ