ಚಾಮರಾಜನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬಿಗೆ ಬೆಂಕಿ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಪಾಪಣ್ಣ ಆರು ಎಕರೆ ಜಮೀನಿನಲ್ಲಿ ಕಬ್ಬನ್ನು ಬೆಳೆದಿದ್ದರು. ಆದರೆ ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂಪಾಯಿ ಬೆಳೆ ಬೆಂಕಿಗೆ ಆಹುತಿಯಾಗಿದೆ. ಕೆಇಬಿ ಅಧಿಕಾರಿಗಳು ಎಳೆದಿರುವ ವಿದ್ಯುತ್ ಕಂಬದ ಲೈನ್ ಜೋತು ಬಿದ್ದಿರುವ ಹಿನ್ನೆಲೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬು ಹೊತ್ತಿ ಉರಿದಿದೆ.
Advertisement
Advertisement
ಈಗಾಗಲೇ ಕಬ್ಬನ್ನು ಬೆಳೆಯುವ ಸಲುವಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದು, ಕಬ್ಬಿಗೆ ಬೆಂಕಿ ಬಿದ್ದಿರುವ ಕಾರಣ ರೈತ ಕಂಗಲಾಗಿದ್ದಾರೆ. ಬೆಳೆ ನಂಬಿ ಬ್ಯಾಂಕ್ ಹಾಗೂ ಖಾಸಗಿಯಾಗಿ 30 ಲಕ್ಷ ಸಾಲ ಮಾಡಿಕೊಂಡಿದ್ದು ಇದೀಗ ಕಬ್ಬಿಗೆ ಬೆಂಕಿ ಬಿದ್ದಿರುವ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ. ಒಂದು ವೇಳೆ ಕೆಇಬಿ ಅಧಿಕಾರಿಗಳು ಸೂಕ್ತ ಪರಿಹಾರ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.