ಚಾಮರಾಜನಗರ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಗಾಂಧಿ ಮಕ್ಕಳಿದ್ದಂತೆ ಎಂದು ಸಂಸದ ಶ್ರೀನಿವಾಸ್‍ಪ್ರಸಾದ್ ಅವರು ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೇ ಪಾಪ ನಾನು ಇದ್ದಾಗ ಮಕ್ಕಳು ರಾಜಕೀಯಕ್ಕೆ ಬಂದಿದ್ದಾರೆ ಎಂದು ಪ್ರಿಯಾಂಕಗಾಂಧಿ ಮತ್ತು ರಾಹುಲ್‍ಗಾಂಧಿಯನ್ನು ವ್ಯಂಗ್ಯವಾಡಿದ್ದಾರೆ.
Advertisement
ಬಹು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಅವರಿಗೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವುದಕ್ಕೂ ಸ್ಥಾನ ಇಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ 44 ಸ್ಥಾನದಿಂದ ಈ ಬಾರಿ ಚುನಾವಣೆಯಲ್ಲಿ 52 ಸ್ಥಾನಕ್ಕೆ ಬಂದಿದ್ದಾರೆ. ಏಕೆ ಪ್ರಿಯಾಂಕಗಾಂಧಿ ಮತ್ತು ರಾಹುಲ್‍ಗಾಂಧಿ ಬಗ್ಗೆ ಮಾತಾನಾಡುತ್ತೀರಾ? ಅವರು ಮೊದಲು ಪಕ್ಷ ಸಂಘಟನೆ ಮಾಡುವ ಕಡೆ ಗಮನಹರಿಸಲಿ ಬಿಡಿ ಎಂದು ಹೇಳಿದರು.
Advertisement
Advertisement
ಇದೇ ವೇಳೆ ಮೈತ್ರಿ ಸರ್ಕಾರದ ಬಗ್ಗೆ ಮಾತಾನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಸಿದ್ದರಾಮಯ್ಯ ಬಗ್ಗೆ ಎಷ್ಟು ಸಲ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಎಲ್ಲರಿಗೂ ಗೊತ್ತು. ಸಿದ್ದರಾಮಯ್ಯ ಅವರ ಮೇಲೆ ಚುನಾವಣೆ ಮುನ್ನವೇ ಅಸಮಾಧಾನ ತೋಡಿಕೊಂಡಿದ್ದಾರೆ. ಕುಮಾರ ಪರ್ವ ಆರಂಭ ಆಗಿದ್ದೆ ಚಾಮುಂಡೇಶ್ವರಿ ಕ್ಷೇತ್ರದಿಂದ. ಇದೆಲ್ಲವೂ ಲೋಕಸಭಾ ಫಲಿತಾಂಶದಲ್ಲಿ ಗೊತ್ತಾಗಿದೆ ಎಂದು ಹೇಳಿದರು.
Advertisement
ದೇವೇಗೌಡರು ಸೋತು ಮನೆಗೆ ಹೋಗಿದ್ದು, ಮಂಡ್ಯದಲ್ಲಿ ಸೋತಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೊಂದು ಒಂದು ಸ್ಥಾನ ಬಂದಿರೋದು ಇಲ್ಲೇ ದೋಸ್ತಿ ಸರ್ಕಾರದ ಸಾಧನೆ ಏನು ಎನ್ನುವುದು ಗೊತ್ತಾಗುತ್ತದೆ ಎಂದು ತಿಳಿಸಿದರು.