ಚಾಮರಾಜನಗರ: ಜಿಲ್ಲೆಯ ಅವಳಿ ಜಲಾಶಯಗಳೆಂದೇ ಹೆಸರಾಗಿರುವ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಭಾನುವಾರ 2 ಕ್ರಸ್ಟ್ ಗೇಟ್‍ಗಳ ಮೂಲಕ ಸುವರ್ಣಾವತಿ ಜಲಾಶಯದಿಂದ 900 ಕ್ಯೂಸೆಕ್‍ಗೂ ಅಧಿಕ ನೀರನ್ನು ಹೊರಬಿಡಲಾಗುತ್ತಿದೆ.
Advertisement
ತಮಿಳುನಾಡಿನ ದಿಂಬಂ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಜಿಲ್ಲೆಯ ಸುವರ್ಣಾವತಿ ಜಲಾಶಯ ಉಕ್ಕಿ ಹರಿಯುತ್ತಿದ್ದು, 2 ಕ್ರಸ್ಟ್ ಗೇಟ್‍ಗಳ ಮೂಲಕ 900 ಕ್ಯೂಸೆಕ್‍ಗೂ ಅಧಿಕ ನೀರನ್ನು ಹೊರ ಬಿಡಲಾಗುತ್ತಿದೆ. ಇದನ್ನೂ ಓದಿ: ಹೆಣ್ಣು ಮಗು ಮಾರಾಟ ಮಾಡಿದ್ರಾ ಭಿಕ್ಷುಕ ದಂಪತಿ?
Advertisement
ಸುವರ್ಣಾವತಿ ಜಲಾಶಯದಲ್ಲಿ 11 ವರ್ಷದ ಬಳಿಕ ಇಷ್ಟೊಂದು ಪ್ರಮಾಣದಲ್ಲಿ ನೀರನ್ನು ಹರಿ ಬಿಡಲಾಗುತ್ತಿದೆ. 2010ರಲ್ಲಿ ಒಳಹರಿವು ಹೆಚ್ಚಾಗಿ ನೀರನ್ನು ಹರಿಬಿಟ್ಟಿದ್ದು ಹೊರತುಪಡಿಸಿದರೆ, ಬಳಿಕ ತಕ್ಕಮಟ್ಟಿಗಷ್ಟೇ ಅವಳಿ ಜಲಾಶಯಗಳು ತುಂಬುತ್ತಿದ್ದವು. ಆದರೆ ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳಿಗೆ ಜೀವಕಳೆ ಬಂದಂತಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಅವ್ರೆ ಯಾರೋ ಬರೆದ್ಕೊಟ್ಟ ಬಜೆಟ್ ಓದಿದಂಗಲ್ಲಾ ಬಿಟ್ ಕಾಯಿನ್ ವಹಿವಾಟು: ಪ್ರತಾಪ್ ಸಿಂಹ
Advertisement
Advertisement
ಸುವರ್ಣಾವತಿ ಜಲಾಶಯವು ಗರಿಷ್ಠ ಮಟ್ಟ ತಲುಪಿದ ಹಿನ್ನೆಲೆಯಲ್ಲಿ 900 ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಅಚ್ಚುಕಟ್ಟು ಪ್ರದೇಶ ಹಾಗೂ ನದಿ ಪಾತ್ರದ ಜನರು, ರೈತರು ಮುನ್ನೆಚ್ಚರಿಕೆಯಿಂದ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಆಸ್ತಿ-ಪಾಸ್ತಿ, ಜಾನುವಾರುಗಳ ಬಗ್ಗೆ ನಿಗಾ ವಹಿಸಬೇಕೆಂದು ಕಬಿನಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಮನವಿ ಮಾಡಿದ್ದಾರೆ.