Connect with us

ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರು ನಕಾರ – ಬೈಕ್‍ನಲ್ಲಿ ಶವ ಸಾಗಿಸಿ ಪಿಎಫ್‍ಐ ಕಾರ್ಯಕರ್ತರಿಂದ ಅಂತ್ಯಕ್ರಿಯೆ

ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರು ನಕಾರ – ಬೈಕ್‍ನಲ್ಲಿ ಶವ ಸಾಗಿಸಿ ಪಿಎಫ್‍ಐ ಕಾರ್ಯಕರ್ತರಿಂದ ಅಂತ್ಯಕ್ರಿಯೆ

ಚಾಮರಾಜನಗರ: ಮೃತಪಟ್ಟ ವ್ಯಕ್ತಿಯ ಶವವನ್ನು ಬೈಕಿನಲ್ಲಿ ಸಾಗಿಸಿ ಅಂತ್ಯಕ್ರಿಯೆ ಮಾಡುವ ಮೂಲಕ ಪಿಎಫ್‍ಐ ಸಂಘಟನೆ ಕಾರ್ಯಕರ್ತರು ಮಾನವೀಯತೆ ಮೆರೆದಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಆಲದಹಳ್ಳಿಯಲ್ಲಿ ಮೃತಪಟ್ಟಿದ್ದ ಮಾದೇವ (65) ಶವವನ್ನು ಬೈಕಿನಲ್ಲಿ ಸಾಗಿಸಿ ಅಂತ್ಯಕ್ರಿಯೆ ನಡೆಸಲಾಯಿತು.

ಹೆಂಡತಿ, ಮಕ್ಕಳಿಲ್ಲದ ಮಾದೇವ ಭಾನುವಾರ ಮನೆಯಲ್ಲಿ ಮೃತಪಟ್ಟಿದ್ದಾರೆ. ಕೊರೊನಾದಿಂದ ಮೃತಪಟ್ಟಿರಬಹುದು ಎಂದು ಗ್ರಾಮಸ್ಥರು ಅಂತ್ಯಕ್ರಿಯೆ ನಡೆಸಲು ಹೆದರಿದರು. ನಂತರ ಪಿಎಫ್‍ಐ ಸಂಘಟನೆಗೆ ಕರೆ ಮಾಡಿದಾಗ, ಸ್ಥಳಕ್ಕೆ ಆಗಮಿಸಿದ ಕಾರ್ಯಕರ್ತರು ಶವಸಂಸ್ಕಾರಕ್ಕೆ ಗ್ರಾಮಸ್ಥರ ನೆರವು ಕೋರಿದರು.

ಕೋವಿಡ್ ಭಯದಿಂದ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರು ಯಾರೂ ಮುಂದೆ ಬರಲಿಲ್ಲ. ವಾಹನ ಕೂಡ ನೀಡಲಿಲ್ಲ. ತಾಲೂಕು ಆಡಳಿತದ ಸಹಾಯವೂ ಸಿಗಲಿಲ್ಲ. ಕೊನೆಗೆ ಪಿಎಫ್‍ಐ ಸಂಘಟನೆ ಕಾರ್ಯಕರ್ತರು ದ್ವಿಚಕ್ರ ವಾಹನದಲ್ಲಿ ಶವವನ್ನು ಸಾಗಿಸಿದ್ದಾರೆ. ಈ ವೇಳೆ ಗ್ರಾಮಾಂತರ ಠಾಣೆ ಪೊಲೀಸರು ಶವ ಹೂಳಲು ಗೋಮಾಳದಲ್ಲಿ ಜಾಗ ತೋರಿಸಿದ್ದಾರೆ. ನಂತರ ಸಂಘಟನೆಯವರು ಶವಸಂಸ್ಕಾರ ಮಾಡಿದರು.

Advertisement
Advertisement