Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಕೊನೆಗೂ ಭರವಸೆಯ ಬೆಳಕು; ಸರ್ಕಾರಿ ನೌಕರಿ ಕೊಡಲು ಸಚಿವ ಸಂಪುಟ ಅಸ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಕೊನೆಗೂ ಭರವಸೆಯ ಬೆಳಕು; ಸರ್ಕಾರಿ ನೌಕರಿ ಕೊಡಲು ಸಚಿವ ಸಂಪುಟ ಅಸ್ತು

Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಕೊನೆಗೂ ಭರವಸೆಯ ಬೆಳಕು; ಸರ್ಕಾರಿ ನೌಕರಿ ಕೊಡಲು ಸಚಿವ ಸಂಪುಟ ಅಸ್ತು

Public TV
Last updated: September 13, 2025 12:15 am
Public TV
Share
1 Min Read
DK Shivakumar Oxygen Tragedy 1
SHARE

– ಸಂತ್ರಸ್ತರ ವಿದ್ಯಾರ್ಹತೆ ಮೇಲೆ ನೌಕರಿ ಕೊಡಲು ನಿರ್ಧಾರ

ಚಾಮರಾಜನಗರ: ಚಾಮರಾಜನಗರದಲ್ಲಿ ಕೊರೊನಾ ವೇಳೆ ಆಕ್ಸಿಜನ್ ಕೊರತೆ ದುರಂತದಲ್ಲಿ ಮೃತಪಟ್ಟ ಕುಟುಂಬ ವರ್ಗದವರಲ್ಲಿ ಕೊನೆಗೂ ಭರವಸೆಯ ಬೆಳಕು ಮೂಡಿದೆ. ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ನೀಡಲು ಸರ್ಕಾರ ಮುಂದಾಗಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆ ನಡೆದ ಆಕ್ಸಿಜನ್ ಕೊರತೆಯ ದುರಂತ ಹಲವು ಕುಟುಂಬಗಳ ಬದುಕನ್ನೇ ಮೂರಾಬಟ್ಟೆಯಾಗಿಸಿತ್ತು. ಕೋವಿಡ್ ಎರಡನೇ ಅಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ 36 ಜನ ಕೊನೆಯುಸಿರು ಎಳೆದಿದ್ದರು‌. ಮನೆಗೆ ಆಧಾರಸ್ತಂಭವಾಗಿದ್ದವರನ್ನು ಕಳೆದುಕೊಂಡು 36 ಕುಟುಂಬಗಳ ಜೀವನ ನರಕಮಯವಾಗಿತ್ತು. ಬದುಕು ಸಾವಿಸುವುದೇ ದುಸ್ತರವಾಗಿತ್ತು. ಈ ವೇಳೆ ಕೆಪಿಸಿಸಿ ವತಿಯಿಂದ ತಲಾ ಒಂದು ಲಕ್ಷ ನೀಡಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮೃತರ ಕುಟುಂಬ ವರ್ಗದವರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಲಾಗಿತ್ತು.

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಸಹ ಸರ್ಕಾರಿ ಉದ್ಯೋಗದ ಆಶ್ವಾಸನೆ ನೀಡಿದ್ದರು. ಕಾಂಗ್ರೆಸ್ ಸರ್ಕಾರವೇನೋ ಬಂತು. ಆದರೆ, ಭರವಸೆ ಮಾತ್ರ ಈಡೇರಲಿಲ್ಲ. ಸಂತ್ರಸ್ತರ ಪರವಾಗಿ ಹಲವು ಹೋರಾಟಗಳು ನಡೆದರೂ ಪ್ರಯೋಜನವಾಗಿರಲಿಲ್ಲ. ಈ ನಡುವೆ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಸದನದಲ್ಲಿ ವಿಷಯ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದಿದ್ದರು. ಸಂತ್ರಸ್ತರ ಸಂಪೂರ್ಣ ವಿವರ ತರಿಸಿಕೊಂಡ ಸರ್ಕಾರ ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಕಂಪದ ಆಧಾರದಲ್ಲಿ ಸಂತ್ರಸ್ತರ ವಿದ್ಯಾರ್ಹತೆಗೆ ಅನುಗುಣವಾಗಿ ಸರ್ಕಾರಿ ಉದ್ಯೋಗ ನೀಡಲು ಅನುಮೋದನೆ ನೀಡಿದೆ.

ಕಳೆದ ನಾಲ್ಕು ವರ್ಷಗಳಿಂದ ಹಲವಾರು ರೀತಿಯ ಹೋರಾಟ ನಡೆಸಿದ್ದ ಸಂತ್ರಸ್ತರು ಹೈರಾಣಾಗಿ ಹೋಗಿದ್ದರು. ಸರ್ಕಾರಿ ಉದ್ಯೋಗದ ಭರವಸೆಯನ್ನೇ ಕಳೆದುಕೊಂಡಿದ್ದರು. ಇದೀಗ ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಸಚಿವ ಸಂಪುಟದ ತೀರ್ಮಾನ ಸಂತ್ರಸ್ತರ ಬದುಕಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಮೊದಲ ಹಂತದಲ್ಲಿ 21 ಮಂದಿಗೆ, ಬಳಿಕ ತಾಂತ್ರಿಕ ಸಮಸ್ಯೆ ನಿವಾರಿಸಿ ಉಳಿದವರಿಗೆ ಸರ್ಕಾರಿ ಉದ್ಯೋಗ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸರ್ಕಾರಕ್ಕೆ ಹಾಗೂ ನಮ್ಮ ಜೊತೆಗೆ ನಿಂತ ಎಲ್ಲರಿಗೂ ಧನ್ಯವಾದ ಹೇಳ್ತೀವಿ ಎಂದರು.

Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
54 seconds ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌ – ಕಿಡ್ನ್ಯಾಪ್‌ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿನಿ ತಾಯಿ

Public TV
By Public TV
18 minutes ago
daily horoscope dina bhavishya
Astrology

ದಿನ ಭವಿಷ್ಯ 10-04-2026

Public TV
By Public TV
43 minutes ago
Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
8 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
8 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?