ಚಾಮರಾಜನಗರ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮೆಚ್ಚಿದ್ದ ಕವಿ ಮಂಜುನಾಥ್‌ಗೆ (Poet Manjunath) ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.
ಜೋಗುಳ ಪದ ರಚಿಸಿದ್ದ ಕೊಳ್ಳೇಗಾಲದ ಕವಿ ಮಂಜುನಾಥ್ ಅವರಿಗೆ ಕೇಂದ್ರ ಸರ್ಕಾರದ ದೆಹಲಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ಬಂದಿದೆ. ವೃತ್ತಿಯಲ್ಲಿ ಎಲ್ಐಸಿ ವಿಮಾ ಪಾಲಿಸಿದಾರರಾಗಿರುವ ಮಂಜುನಾಥ್, ಪ್ರವೃತ್ತಿಯಲ್ಲಿ ಕವಿಯಾಗಿದ್ದಾರೆ. ಇದನ್ನೂ ಓದಿ: ಮನ್ ಕಿ ಬಾತ್‌ನಲ್ಲಿ ರಾಜ್ಯದ ಲಾಲಿಹಾಡು ಪ್ರಸಾರ – ʼಮಲಗು ಕಂದʼ ಹಾಡಿಗೆ ಪ್ರಧಾನಿ ಮೋದಿ ಪ್ರಶಂಸೆ
Advertisement
Advertisement
ಕೋವಿಡ್ ವೇಳೆ ‘ಮಲಗು ಕಂದ ಮಲಗು ಕೂಸೆ, ಮಲಗು ನನ್ನ ಜಾಣ ಮರಿಯೇ’ ಎಂಬ ಸಾಲಿನಿಂದ ಜೋಗುಳ ಪದ ರಚಿಸಿದ್ದರು. ಕೇಂದ್ರ ಸರ್ಕಾರದ ವತಿಯಿಂದ 75 ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಆನ್‌ಲೈನ್ ರಂಗೋಲಿ, ದೇಶಭಕ್ತಿ ಗೀತೆ, ಲಾಲಿಹಾಡು ಸ್ಪರ್ಧೆ ಆಯೋಜಿಸಲಾಗಿತ್ತು. ಪುತ್ರನ ಒತ್ತಾಸೆಗೆ ಮಣಿದು ಜೋಗುಳದ ಹಾಡು ರಚಿಸಿದ್ದ ಕವಿ ಮಂಜುನಾಥ್.
Advertisement
ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯ ರಾಷ್ಟ್ರಮಟ್ಟದಲ್ಲಿ ನಡೆಸಿದ್ದ ಪೆನ್ ಎ ಲೋರಿ ಎಂಬ ಜೋಗುಳ ಗೀತೆ ಸ್ಪರ್ಧೆಯಲ್ಲಿ ಚಾಮರಾಜನಗರ ಜಿಲ್ಲೆಯ ಕವಿ ಮಂಜುನಾಥ್ ಪ್ರಥಮ ಸ್ಥಾನ ಪಡೆದಿದ್ದರು. ಇದನ್ನೂ ಓದಿ: ಪ್ರಾಣಪ್ರತಿಷ್ಠೆ ಹಿನ್ನೆಲೆ ಹೈಅಲರ್ಟ್ – ಜ.22ರಂದು ರಾಜ್ಯದ ಪೊಲೀಸ್ ಸಿಬ್ಬಂದಿಗೆ ರಜೆ ಇಲ್ಲ..?
Advertisement
“ಮಲಗು ಕಂದ, ಮಲಗು ಕೂಸೆ” ಎಂಬ ಈ ಲಾಲಿಹಾಡಿಗೆ ಅವರ ತಾಯಿ, ಅಜ್ಜಿ ಹಾಡುತ್ತಿದ್ದ ಜೋಗುಳಗಳೇ ಸ್ಫೂರ್ತಿಯಾಗಿವೆ. ಇದನ್ನು ಕೇಳಿದರೆ ನಿಮಗೂ ಆನಂದವಾಗುತ್ತದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಪ್ರಶಂಸಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆಗೆ ಪಾತ್ರವಾಗಿದ್ದ ಹಾಡಿಗೆ 6 ಲಕ್ಷ ರೂ. ನಗದು ಬಹುಮಾನದ ಮನ್ನಣೆ ಸಿಕ್ಕಿತ್ತು. ಈಗ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಕವಿ ಮಂಜುನಾಥ್ ಅವರಿಗಾಗಿ ಟಿಕೆಟ್ ಬುಕ್ ಮಾಡಲಾಗಿದೆ. ಮಂಜುನಾಥ್ ದಂಪತಿ ಗಣರಾಜ್ಯೋತ್ಸವದಂದು ದೆಹಲಿಗೆ ತೆರಳಲಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಗರ್ಭಗುಡಿ ಪೀಠದಲ್ಲಿ ಬಾಲರಾಮ – ಮೊದಲ ಚಿತ್ರ ವೈರಲ್