ನವದೆಹಲಿ: ಜಾರ್ಖಂಡ್ (Jharkhand) ಮಾಜಿ ಸಿಎಂ, ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನಾಯಕ ಚಂಪೈ ಸೊರೆನ್ (Champai Soren) ಆ.30 ರಂದು ಬಿಜೆಪಿ (BJP) ಸೇರಲಿದ್ದಾರೆ.
ನವೆಂಬರ್-ಡಿಸೆಂಬರ್‌ನಲ್ಲಿ ನಡೆಯಲಿರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯ ಸಹ-ಪ್ರಭಾರಿಯೂ ಆಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರೊಂದಿಗೆ ಚಂಪೈ ಸೋಮವಾರ ತಡರಾತ್ರಿ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿಯಾದ ನಂತರ ಈ ನಿರ್ಧಾರ ಪ್ರಕಟವಾಗಿದೆ.
Advertisement
ಆಗಸ್ಟ್ 30 ರಂದು ಚಂಪೈ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ. ಚಂಪೈ ಸೊರೆನ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಕಳೆದ ಎರಡು ವಾರಗಳಿಂದ ಹರಿದಾಡುತ್ತಿತ್ತು. ಆದರೆ ಅಧಿಕೃತವಾಗಿ ತಿಳಿದು ಬಂದಿರಲಿಲ್ಲ. ಚಂಪೈ ಸೊರೆನ್ ಮಾತ್ರ ಸೇರ್ಪಡೆಯಾಗುತ್ತಾರಾ ಉಳಿದ ಶಾಸಕರು ಸೇರ್ಪಡೆಯಾಗುತ್ತಾರಾ ಎನ್ನುವುದರ ಬಗ್ಗೆ ಯಾವುದೇ ವರದಿ ಪ್ರಕಟವಾಗಿಲ್ಲ. ಇದನ್ನೂ ಓದಿ: ಪರಪ್ಪನ ಜೈಲಿಂದ ಹಿಂಡಲಗಾ ಜೈಲಿಗೆ ‘ಜಗ್ಗುದಾದ’ ಶಿಫ್ಟ್ ಸಾಧ್ಯತೆ – ಬೆಳಗಾವಿ ಜೈಲಿನ ವಿಶೇಷತೆ ಏನು?
Advertisement
Former Chief Minister of Jharkhand and a distinguished Adivasi leader of our country, @ChampaiSoren Ji met Hon’ble Union Home Minister @AmitShah Ji a short while ago. He will officially join the @BJP4India on 30th August in Ranchi. pic.twitter.com/OOAhpgrvmu
— Himanta Biswa Sarma (@himantabiswa) August 26, 2024
Advertisement
ಪ್ರಸ್ತುತ ಹೇಮಂತ್ ಸೊರೆನ್ ಕ್ಯಾಬಿನೆಟ್‌ನಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಚಂಪೈ ಅವರು ಇನ್ನೂ ಜೆಎಂಎಂ ಪಕ್ಷ ಮತ್ತು ಸರ್ಕಾರ ಎರಡಕ್ಕೂ ರಾಜೀನಾಮೆ ನೀಡಿಲ್ಲ.
Advertisement
ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರೇನ್ (Hemant Soren) ಭೂ ಹಗರಣ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದಾಗ ಚಂಪೈ ಸೋರೆನ್ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ನೇಮಿಸಲಾಗಿತ್ತು. ಸುಮಾರು ಐದು ತಿಂಗಳ ಕಾಲ ಜೈಲಿನಲ್ಲಿದ್ದ (Jail) ಹೇಮಂತ್ ಸೊರೇನ್ ಜೂನ್ 28ರಂದು ಬಿಡುಗಡೆಯಾಗಿದ್ದರು. ಇದಾದ ನಂತರ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ರಾಜ್ಯದ ಅಧಿಕಾರವನ್ನು ಮರಳಿ ವಹಿಸಿಕೊಂಡರು. ಅಧಿಕಾರದಿಂದ ಕೆಳಗಡೆ ಇಳಿಸಿದ ಬಳಿಕ ಚಂಪೈ ಸೊರೆನ್ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ.
ಚಂಪೈ ಸೊರೆನ್ ಅವರು ಫೆಬ್ರವರಿ 2 ರಿಂದ ಜುಲೈ 3 ರವರೆಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದರು. ಜೆಎಂಎಂನ ಹಿರಿಯ ನಾಯಕರಾಗಿರುವ ಚಂಪೈ ಸೊರೆನ್ ಏಳು ಬಾರಿ ಶಾಸಕರಾಗಿದ್ದಾರೆ.
2005 ರಿಂದ ಅವರು ನಿರಂತರವಾಗಿ ಸರಯ್ಕೆಲಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 1991 ರಲ್ಲಿ ಅವರು ಸರಯ್ಕೆಲಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾದರು. ಹೇಮಂತ್ ಸೊರೆನ್ ಅವರು 2019 ರಲ್ಲಿ ಚಂಪೈ ಸೊರೆನ್ ಅವರನ್ನು ಕ್ಯಾಬಿನೆಟ್ ಸಚಿವರನ್ನಾಗಿ ಮಾಡಿದರು. ಅವರಿಗೆ ಸಾರಿಗೆ, ಪರಿಶಿಷ್ಟ ಪಂಗಡಗಳು ಮತ್ತು ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯನ್ನು ನೀಡಲಾಗಿದೆ.
ಚಂಪೈ ಸೊರೆನ್‌ನನ್ನು ಕೊಲ್ಹಾನ್‌ನ ಹುಲಿ ಎಂದು ಕರೆಯಲಾಗುತ್ತದೆ. 2019 ರ ವಿಧಾನಸಭಾ ಚುನಾವಣೆಯಲ್ಲಿ ಕೊಲ್ಹಾನ್ ಪ್ರದೇಶದ 14 ಸ್ಥಾನಗಳಲ್ಲಿ ಬಿಜೆಪಿ ಶೂನ್ಯ ಸ್ಥಾನಗಳನ್ನು ಗಳಿಸಿತ್ತು. 2024ರಲ್ಲಿ ಲೋಕಸಭಾ ಚುನಾವಣೆಯಲ್ಲೂ ಕೊಲ್ಹಾನ್ ಭಾಗದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿತ್ತು. ಕೊಲ್ಹಾನ್ ಪ್ರದೇಶದ 14 ವಿಧಾನಸಭಾ ಕ್ಷೇತ್ರಗಳಲ್ಲಿ ಚಂಪೈ ಸೊರೆನ್ ಪ್ರಭಾವವಿದೆ. ಇದನ್ನೂ ಓದಿ: ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ – ಇಂದಿನಿಂದ ಮದ್ಯದ ದರ ಇಳಿಕೆ
ಈ ವರ್ಷದ ಕೊನೆಗೆ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ (Vidhan Sabha Election) ನಡೆಯಲಿದೆ. ಚುನಾವಣೆ ಘೋಷಣೆಗೂ ಮುನ್ನವೇ ರಾಜಕೀಯ ಪಕ್ಷಗಳು ರಾಜಕೀಯ ಜೋರಾಗಿದೆ. ರಾಜ್ಯದಲ್ಲಿ ಒಟ್ಟು 82 ವಿಧಾನಸಭಾ ಸ್ಥಾನಗಳಿದ್ದು, ಈ ಪೈಕಿ ಒಂದು ನಾಮನಿರ್ದೇಶನ ಸ್ಥಾನವಾಗಿದೆ.
ಜೆಎಂಯು ಪ್ರಸ್ತುತ ವಿಧಾನಸಭೆಯಲ್ಲಿ 27 ಶಾಸಕರನ್ನು ಹೊಂದಿರುವ ಅತಿದೊಡ್ಡ ಪಕ್ಷವಾಗಿದ್ದು INDIA ಒಕ್ಕೂಟದ ಭಾಗವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್, ಸಿಪಿಐ(ಎಂ) ಆರ್‌ಜೆಡಿ ಜತೆ ಮೈತ್ರಿ ಮಾಡಿಕೊಂಡು ಜೆಎಂಎಂ ಅಧಿಕಾರದಲ್ಲಿದೆ. ಕಾಂಗ್ರೆಸ್ 18, ಸಿಪಿಐ(ಎಂ) ಮತ್ತು ಆರ್‌ಜೆಡಿ ತಲಾ 1 ಶಾಸಕರನ್ನು ಹೊಂದಿದೆ.
ಜಾರ್ಖಂಡ್‌ನಲ್ಲಿ ಬಿಜೆಪಿ ಪ್ರತಿಪಕ್ಷದಲ್ಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 24 ಸ್ಥಾನಗಳನ್ನು ಗೆದ್ದಿತ್ತು. ಇತರ ವಿರೋಧ ಪಕ್ಷಗಳಲ್ಲಿ ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್ 3, ಸಿಸಿಪಿ 1 ಮತ್ತು ಇಬ್ಬರು ಪಕ್ಷೇತರ ಶಾಸಕರಿದ್ದಾರೆ.
ಈ ಬಾರಿ ನಡೆದ ಲೋಕಸಭಾ ಚುನಾವಣೆಯ ಒಟ್ಟು 14 ಸ್ಥಾನಗಳ ಪೈಕಿ ಬಿಜೆಪಿ 8, ಜೆಎಂಎಂ 3, ಕಾಂಗ್ರೆಸ್ 2, ಎಜೆಸ್‌ಯಪಿ 1 ಸ್ಥಾನವನ್ನು ಗೆದ್ದುಕೊಂಡಿದೆ.