– ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ
ರಾಂಚಿ: ಜೈಲಿನಿಂದ ಹೊರಬಂದ ಹೇಮಂತ್ ಸೊರೇನ್‌ಗೆ ಜಾರ್ಖಂಡ್ ಸಿಎಂ ಚಂಪೈ ಸೊರೇನ್ ಮುಖ್ಯಮಂತ್ರಿ ಖುರ್ಚಿ ಬಿಟ್ಟುಕೊಟ್ಟಿದ್ದಾರೆ. ಚಂಪೈ ಸೊರೇನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಹೇಮಂತ್ ಸೊರೇನ್ ಆಡಳಿತಕ್ಕೆ ದಾರಿ ಮಾಡಿಕೊಟ್ಟಿದ್ದಾರೆ.
ಅಕ್ರಮ ಹಣ ವರ್ಗಾವಣೆ, ಭೂ ಹಗರಣ ಆರೋಪ ಹೊತ್ತಿದ್ದ ಹೇಮಂತ್ ಸೊರೇನ್ ಜೈಲು ಪಾಲಾಗಿದ್ದರು. ಇದಕ್ಕೂ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಸಂದರ್ಭದಲ್ಲಿ ಜಾರ್ಖಂಡ್ ಸಿಎಂ ಆಗಿ ಚಂಪೈ ಸೊರೇನ್ ಅಧಿಕಾರ ವಹಿಸಿಕೊಂಡಿದ್ದರು. ಐದು ತಿಂಗಳ ಬಳಿಕ ಚಂಪೈ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಯಲ್ಲಿ ಮಹಿಳೆಯರ ಪರ ದನಿಯೆತ್ತಿದ್ದ ಸುಧಾ ಮೂರ್ತಿಯನ್ನು ಹೊಗಳಿದ ಪ್ರಧಾನಿ
ಜಾರ್ಖಂಡ್ ಮುಕ್ತಿ ಮೋರ್ಚಾದಲ್ಲಿ ಮೂರನೇ ಸ್ಥಾನದಲ್ಲಿರುವ ಚಂಪೈ ಸೊರೇನ್, ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಅಂದಿನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಬಂಧಿಸಿದ ಎರಡು ದಿನಗಳ ನಂತರ ಪ್ರಮಾಣವಚನ ಸ್ವೀಕರಿಸಿದ್ದರು. ಇದೇ ಜೂನ್ 28ರಂದು ಹೇಮಂತ್ ಸೊರೇನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.