ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ (Kukke Subrahmanya) ದೇವಸ್ಥಾನದಲ್ಲಿ ನಡೆಯುವ ಅತಿದೊಡ್ಡ ಉತ್ಸವ ಎಂದರೆ ಅದು ಚಂಪಾಷಷ್ಠಿ (Champashasti) ಮಹೋತ್ಸವ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ನಡೆದಿದ್ದು, ಸುಬ್ರಹ್ಮಣ್ಯ ದೇವರ ಬ್ರಹ್ಮ ರಥೋತ್ಸವ ಸಂಪನ್ನಗೊಂಡಿದೆ.
ಧನು ಲಗ್ನ ಮುಹೂರ್ತದಲ್ಲಿ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಿದ್ದು, ಸುಬ್ರಹ್ಮಣ್ಯ ದೇವರ ಬ್ರಹ್ಮ ರಥೋತ್ಸವ ಕಣ್ತುಂಬಿಕೊಳ್ಳುವ ಸಲುವಾಗಿ ಭಕ್ತ ಸಾಗರ ಆಗಮಿಸಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ದೊಡ್ಡ ಉತ್ಸವ ಇದಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 10 ರಿಂದ ಕುಕ್ಕೆ ಚಂಪಾಷಷ್ಠಿ ಮಹೋತ್ಸವ ಆರಂಭಗೊಂಡಿದೆ. ದೇವರು ಕೊಪ್ಪರಿಗೆ ಏರುವುದರ ಮೂಲಕ ಜಾತ್ರೆ ಆರಂಭವಾಗಿದೆ. ಈಗಾಗಲೇ ಭಕ್ತರು ಕುಕ್ಕೆಗೆ ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಕೇಂದ್ರದಲ್ಲಿ ಬೇರೆ ಪಕ್ಷ ಇರ್ತಿದ್ರೆ ಬಿಜೆಪಿ ಇಡೀ ದೆಹಲಿ ಬಂದ್ ಮಾಡ್ತಿತ್ತು: ಸಂಜಯ್ ರಾವತ್
ಚಂಪಾಷಷ್ಠಿ ಭಾಗವಾಗಿ ಪ್ರಮುಖವಾಗಿ ನಡೆಯುವುದು ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ. ಡಿ.17ರಂದು ಪಂಚಮಿ ರಥೋತ್ಸವ ಡಿ.18 ರಂದು ಬೆಳಗ್ಗೆ ಚಂಪಾಷಷ್ಠಿ ಬ್ರಹ್ಮರಥೋತ್ಸವ, ಡಿ.19 ರಂದು ಅವಭ್ರಥೋತ್ಸವ ಮತ್ತು ನೌಕವಿಹಾರ, ಡಿ.24 ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೆ ಸಮಾಪನಗೊಳ್ಳಲಿದೆ. ಅಂದು ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನೆರವೇರಲಿದೆ. ಹಾಗೂ ಪುರುಷರಾಯ, ಹೊಸಳಿಗಮ್ಮ ಹಾಗೂ ಪರಿವಾರ ದೈವಗಳ ನಡಾವಳಿ ನಡೆಯಲಿವೆ. ಇದನ್ನೂ ಓದಿ: ವಿಜಯಪುರದಲ್ಲಿ ಬಂಡೆಗೆ ತಲೆ ಜಜ್ಜುವ ವಿಶಿಷ್ಟ ಆಚರಣೆ
ಕುಕ್ಕೆ ಸುಬ್ರಮಣ್ಯ ದೇವರನ್ನು ಬೆಳಕಿಗೆ ತಂದಂತಹ ಪ್ರತೀತಿ ಇರುವ ಮಲೆಕುಡಿಯ ಆದಿವಾಸಿ ಜನಾಂಗದವರು ಚಂಪಾಷಷ್ಠಿ ವೇಳೆಯಲ್ಲಿ ವಿಶಿಷ್ಟವಾಗಿ ಬೆತ್ತದಿಂದ ಬ್ರಹ್ಮರಥವನ್ನು ನಿರ್ಮಿಸುವುದು ಪಾರಂಪರಿಕ ವಾಡಿಕೆಯಾಗಿದೆ. ಬೃಹತ್ ಬ್ರಹ್ಮರಥವನ್ನು ಪ್ರತ್ಯೇಕವಾಗಿ ಹಗ್ಗಗಳ ಬಳಕೆ ಇಲ್ಲದೆ ಬರೀ ಬಿದಿರು ಮತ್ತು ಬೆತ್ತದಲ್ಲಿ ಕೌಶಲ್ಯಕರವಾಗಿ ನಿರ್ಮಿಸುವುದು ಇದರ ವಿಶಿಷ್ಟತೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾ ಮಹೋತ್ಸವ, ರಥೋತ್ಸವವೇ ಆಕರ್ಷಣೆ. ಈ ವೇಳೆ ಸರ್ಪ ಸಂಸ್ಕಾರ ಸಹಿತ ಯಾವುದೇ ಸೇವೆಗಳು ಇರುವುದಿಲ್ಲ. ರಥೋತ್ಸವಕ್ಕೆಂದೇ ನಾನಾ ಭಾಗಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಇದನ್ನೂ ಓದಿ: ಹಿಂದೂಗಳು ಹಲಾಲ್ ಮಾಂಸ ಸೇವನೆ ಬಿಡಿ, ಝಟ್ಕಾಗೆ ಆದ್ಯತೆ ನೀಡಿ: ಕೇಂದ್ರ ಸಚಿವ
ಮಾರ್ಗಶಿರ ಮಾಸದಲ್ಲಿ ಬರುವ ಷಷ್ಠಿಯೇ ಸುಬ್ರಹ್ಮಣ್ಯ ಷಷ್ಠಿ. ಕರಾವಳಿಗರಿಗೆ ಇದೊಂದು ವಿಶೇಷ ಹಬ್ಬವೂ ಹೌದು. ಶಿವ ಹಾಗೂ ಪಾರ್ವತಿಯರ ಮಗನಾದ ಕಾರ್ತಿಕೇಯನು ಕುಮಾರಧಾರ ತಟದಲ್ಲಿ ನೆಲೆಯಾದ ಸ್ಥಳ ಕುಕ್ಕೆ ಸುಬ್ರಹ್ಮಣ್ಯ. ಈ ಸುಬ್ರಹ್ಮಣ್ಯ ಷಷ್ಠಿಯ ಹಿಂದೆಯೂ ಒಂದು ಪೌರಾಣಿಕ ಹಿನ್ನೆಲೆ ಇದೆ. ಸ್ಕಂದ ಷಷ್ಠಿ ನಂತರ ಬರುವ ಆಚರಣೆಯೇ ಸುಬ್ರಹ್ಮಣ್ಯ ಷಷ್ಠಿ. ಮಾರ್ಗಶಿರ ಮಾಸದಲ್ಲಿ ಬರುವ ಈ ಷಷ್ಠಿ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಎಂದೂ ಪ್ರಸಿದ್ಧಿಯನ್ನು ಪಡೆದಿದೆ. ಶುಕ್ಲಪಕ್ಷದ ಆರನೇ ದಿನ ಆಚರಿಸಲ್ಪಡುವ ಷಷ್ಠಿ ಹಿಂದೂಗಳ ಪ್ರಮುಖ ಹಬ್ಬ. ತುಳುನಾಡಿಗೆ ಇದು ಪ್ರಮುಖ ಹಬ್ಬವೂ ಹೌದು. ಇದನ್ನೂ ಓದಿ: ನಮ್ಮ ಮಠಾಧಿಪತಿಗಳ ಕೈಗೆ ಆಯುಧ ಕೊಡ್ಬೇಕು: ದಿಂಗಾಲೇಶ್ವರ ಸ್ವಾಮೀಜಿ
ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿಯ ಸಂಭ್ರಮ ಸಡಗರ ಮನೆ ಮಾಡಿದೆ. ಚಂಪಾಷಷ್ಠಿ ಹಿನ್ನೆಲೆ ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು ಭಕ್ತರ ಕಣ್ಮನ ಸೆಳೆಯುತ್ತಿದೆ. ಚಂಪಾಷಷ್ಠಿ ಅಂಗವಾಗಿ ದೇವರಿಗೆ ಬೆಳಗ್ಗೆ 5 ಗಂಟೆಯಿಂದಲೇ ವಿಶೇಷ ಪೂಜೆ ಪುನಸ್ಕಾರ ನೇರವೇರಿಸಲಾಗುತ್ತಿದೆ. ಇದನ್ನೂ ಓದಿ: ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ದಿನೇಶ್ ಗುಂಡೂರಾವ್
ಬೆಳಗ್ಗಿನಿಂದಲೂ ಅಪಾರ ಸಂಖ್ಯೆಯ ಭಕ್ತರು ದೇವಾಲಯಕ್ಕೆ ಆಗಮಿಸಿ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಕುಕ್ಕೆಯಲ್ಲಿ ಇಂದು ರಥೋತ್ಸವ ನಡೆಯಲಿದ್ದು, ಇಂದಿಗೆ ಸರಿಯಾಗಿ ಒಂದು ತಿಂಗಳಿಗೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ರಥೋತ್ಸವ ನೇರವೇರಲಿದೆ. ಇದನ್ನೂ ಓದಿ: ಗುಡ್‌ನ್ಯೂಸ್ – ಕುನೋ ಪಾರ್ಕ್‌ನಲ್ಲಿ ಇನ್ಮುಂದೆ ಪ್ರವಾಸಿಗರಿಗೆ ಚೀತಾ ವೀಕ್ಷಣೆ ಭಾಗ್ಯ