Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಚಾಂಪಿಯನ್’ ಸಿನಿಮಾದ ಟ್ರೈಲರ್ ರಿಲೀಸ್ : ಚಿತ್ರ ತಂಡಕ್ಕೆ ಡೈನಾಮಿಕ್ ಸ್ಟಾರ್ ದೇವರಾಜ್ ಸಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಚಾಂಪಿಯನ್’ ಸಿನಿಮಾದ ಟ್ರೈಲರ್ ರಿಲೀಸ್ : ಚಿತ್ರ ತಂಡಕ್ಕೆ ಡೈನಾಮಿಕ್ ಸ್ಟಾರ್ ದೇವರಾಜ್ ಸಾಥ್

Cinema

‘ಚಾಂಪಿಯನ್’ ಸಿನಿಮಾದ ಟ್ರೈಲರ್ ರಿಲೀಸ್ : ಚಿತ್ರ ತಂಡಕ್ಕೆ ಡೈನಾಮಿಕ್ ಸ್ಟಾರ್ ದೇವರಾಜ್ ಸಾಥ್

Public TV
Last updated: September 13, 2022 4:43 pm
Public TV
Share
3 Min Read
FotoJet 51
SHARE

ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ (Aditi Prabhudev) ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” (Champion) ಚಿತ್ರದ ಟ್ರೇಲರ್ (Trailer)ಡೈನಾಮಿಕ್ ಸ್ಟಾರ್ ದೇವರಾಜ್ (Devraj) ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು.‌ ಈ ಕುರಿತು ಚಿತ್ರತಂಡವು ಹಲವು ವಿಚಾರಗಳನ್ನು ಹಂಚಿಕೊಂಡಿದೆ. ನಾನು ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್ ಗೆ ಹೇಳಿದ್ದೆ.  ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದು. ಈಗ ಆ ಮಾತು ನಿಜವಾಗಿದೆ. ಸಚಿನ್ ಧನಪಾಲ್ ನಾಯಕನಾಗಿ ನಟಿಸಿರುವ “ಚಾಂಪಿಯನ್” ಚಿತ್ರವನ್ನು ನಾನು ನಿರ್ಮಾಣ ಮಾಡಿದ್ದೀನಿ. ಚಿತ್ರ ಅಕ್ಟೋಬರ್ 14 ರಂದು ಬಿಡುಗಡೆಯಾಗಲಿದೆ. 2019 ರಲ್ಲಿ ಈ ಚಿತ್ರ ಆರಂಭವಾಯಿತು. ನಂತರ ಕೋವಿಡ್.. ಆನಂತರ ನಮ್ಮ ಚಿತ್ರದ ನಿರ್ದೇಶಕ ಶಾಹುರಾಜ್ ಶಿಂಧೆ ಅವರ ಹಠಾತ್ ನಿಧನ. ಈ ರೀತಿ ಹಲವು ಅಡೆತಡೆಗಳನ್ನು ದಾಟಿ ಈಗ ಚಿತ್ರ ಬಿಡುಗಡೆ ಹಂತ ತಲುಪಿದೆ‌. ಉತ್ತರ ಕರ್ನಾಟಕದ ನನ್ನ ಸ್ನೇಹಿತರು ತಮ್ಮದೇ ಚಿತ್ರ ಅನ್ನುವ ಹಾಗೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ನನ್ನ ಹಾಗೂ ಸಚಿನ್ ಕುಟುಂಬದವರು ಸಾಕಷ್ಟು ಜನ ಆರ್ಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆರ್ಮಿಯಲ್ಲಿ ನಮಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರೆಲ್ಲರ ಬೆಂಬಲ ಕೂಡ ನಮ್ಮಗಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದೇವರಾಜ್ ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕ ಶಿವಾನಂದ ಎಸ್ ನೀಲಣ್ಣನವರ್.

FotoJet 2 33

ನಾನು ಚಿತ್ರದಲ್ಲಿ ನಟಿಸುತ್ತೇನೆ ಎಂದು ಅಂದು ಕೊಂಡಿರಲಿಲ್ಲ. ಏಕೆಂದರೆ ನನ್ನ ತಂದೆ, ತಮ್ಮ ಎಲ್ಲಾ ಆರ್ಮಿಯಲ್ಲಿದ್ದಾರೆ. ನಾನು ಸಹ ಪರೀಕ್ಷೆ ಬರೆದಿದ್ದೆ. ಆದರೆ ಸೆಲೆಕ್ಟ್ ಆಗಲಿಲ್ಲ. ಹನ್ನೆರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಕೆಲಸ ಮಾಡುತ್ತಿದ್ದೆ. ಕೆಲವು ವರ್ಷಗಳ ಹಿಂದೆ ನನ್ನ ಸ್ನೇಹಿತ ಶಿವಾನಂದ, ಕೊಟ್ಟ ಮಾತಿನಂತೆ “ಚಾಂಪಿಯನ್” ಚಿತ್ರದ ಮೂಲಕ ನನ್ನನ್ನು ಹೀರೋ ಮಾಡಿದ್ದಾರೆ.  ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೀನಿ. ಅದಿತಿ ಪ್ರಭುದೇವ ಸೇರಿದಂತೆ ಎಲ್ಲರ ಅಭಿನಯ ಚೆನ್ನಾಗಿದೆ. ಸನ್ನಿಲಿಯೋನ್ ಈ ಚಿತ್ರದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.  ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದೇವರಾಜ್ ಸರ್ ಗೆ, ಸಮಾರಂಭಕ್ಕೆ ಆಗಮಿಸಿರುವ ಲಹರಿ ವೇಲು ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ. ಮುಂದಿನ ತಿಂಗಳ ಹದಿನಾಲ್ಕು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ ಪ್ರೋತ್ಸಾಹ ನೀಡಿ ಎಂದರು ನಾಯಕ ಸಚಿನ್ ಧನಪಾಲ್ (Sachin Dhanapal). ಇದನ್ನೂ ಓದಿ:ನಾಯಕಿ ರುಕ್ಮಿಣಿ ಜೊತೆ ಆಫ್ರಿಕಾಗೆ ಹೊರಟು ನಿಂತ ಗೋಲ್ಡನ್ ಸ್ಟಾರ್ ಗಣೇಶ್

FotoJet 1 35

ನಾನು ಈ ಚಿತ್ರದಲ್ಲಿ ನಟಿಸಲು ಪ್ರಮುಖ ಕಾರಣ ನಿರ್ದೇಶಕ ಶಾಹುರಾಜ್ ಶಿಂಧೆ. ಇಂದು ಅವರಿಲ್ಲದಿರುವುದು ತುಂಬಾ ದುಃಖದ ವಿಷಯ.  ಉತ್ತರ ಕರ್ನಾಟಕದ ನಿರ್ಮಾಪಕ ಶಿವಾನಂದ್ ಅವರ ಬಗ್ಗೆ ನನಗೆ ಹೆಮ್ಮೆಯಿದೆ. ಸ್ನೇಹಿತನಿಗಾಗಿ ಅವರು ಚಿತ್ರ ನಿರ್ಮಾಣ ಮಾಡಿರುವುದು ನಿಜಕ್ಕೂ ಖುಷಿಯ ವಿಚಾರ.  ಮೊದಲ ಚಿತ್ರದಲ್ಲೇ ಸಚಿನ್ ಚೆನ್ನಾಗಿ ನಟಿಸಿದ್ದಾರೆ. ನನ್ನ‌ ಪಾತ್ರ ಕೂಡ ಚೆನ್ನಾಗಿದೆ. ನಿಮ್ಮೆಲ್ಲರ ಬೆಂಬಲ ನಮ್ಮ ಚಿತ್ರಕ್ಕಿರಲಿ ಎಂದು ನಟಿ‌ ಅದಿತಿ ಪ್ರಭುದೇವ ತಿಳಿಸಿದರು. ನನ್ನ ಮನೆಗೆ ಶಿವಾನಂದ್ ಹಾಗೂ ಸಚಿನ್ ಅವರು ಬಂದಿದಾಗ ನಾನು, ನಿರ್ಮಾಪಕ ಹಾಗೂ ಹೀರೋ ಬಂದಿದ್ದಾರೆ ಅಂದು ಕೊಂಡಿದ್ದೆ. ಆನಂತರ ಇವರ ಸ್ನೇಹದ ಬಗ್ಗೆ ತಿಳಿದು ಆನಂದವಾಯಿತು. ನಾನು ಕೂಡ ಈ ಚಿತ್ರದಲ್ಲಿ ನಟಿಸಿದ್ದೇನೆ ಎಂದರು ನಟ ದೇವರಾಜ್.ಲಹರಿ ವೇಲು “ಚಾಂಪಿಯನ್” ಗೆ ಶುಭ ಕೋರಿದರು. ಛಾಯಾಗ್ರಾಹಕ ಸರವಣನ್ ನಟರಾಜನ್ ಹಾಗೂ ನೃತ್ಯ ನಿರ್ದೇಶಕ ಧನು ಮಾಸ್ಟರ್ ಚಿತ್ರದ ಬಗ್ಗೆ ‌ಮಾತನಾಡಿದರು.

Live Tv
[brid partner=56869869 player=32851 video=960834 autoplay=true]

TAGGED:Aditi PrabhudevChampionDevrajSachin DhanapalSivananda Neelannavartrailerಅದಿತಿ ಪ್ರಭುದೇವ್ಚಾಂಪಿಯನ್ಟ್ರೈಲರ್ದೇವರಾಜ್ಶಿವಾನಂದ ನೀಲಣ್ಣವರ್ಸಚಿನ್ ಧನಪಾಲ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
24 minutes ago
Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
27 minutes ago
Lashkar Module
Latest

ಭಾರತದಲ್ಲಿ ದಾಳಿಗೆ ಸಂಚು ಪ್ರಕರಣ – ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಸಂಪರ್ಕದಲ್ಲಿದ್ದ ಕಾಶ್ಮೀರಿ ಉಗ್ರ

Public TV
By Public TV
37 minutes ago
HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
1 hour ago
Bagalkote stone pelting Case 7 innocent people arrested Muslims appeal for their release
Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
By Public TV
1 hour ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?