ನವದೆಹಲಿ: ಬಹಳ ವಿಳಂಬದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಮಂಗಳವಾರ ಅಧಿಕೃತವಾಗಿ ಚಾಂಪಿಯನ್ಸ್ ಟ್ರೋಫಿ 2025 (Champions Trophy 2025) ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತಿರುವ ಎಲೈಟ್ ಪಂದ್ಯಾವಳಿಯು ಫೆಬ್ರವರಿ 19 ರಂದು ಕರಾಚಿಯಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾಡೆಲ್‌ನಲ್ಲೇ ಆಟ – ತಟಸ್ಥ ತಾಣಗಳಲ್ಲಿ ಭಾರತದ ಪಂದ್ಯಗಳ ಆಯೋಜನೆ: ಖಚಿತಪಡಿಸಿದ ICC
Advertisement
Advertisement
ಮಾರ್ಚ್ 9 ರಂದು ಫೈನಲ್ ಪಂದ್ಯ ನಡೆಯಲಿದೆ. ಭಾರತವು ಫೆಬ್ರವರಿ 20 ರಂದು ಬಾಂಗ್ಲಾದೇಶ ತಂಡದ ವಿರುದ್ಧ ಚಾಂಪಿಯನ್ಸ್ ಟ್ರೋಫಿಯ ತನ್ನ ಮೊದಲ ಪಂದ್ಯವನ್ನು ದುಬೈನಲ್ಲಿ ಆಡಲಿದೆ. ಭಾರತ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
Advertisement
ಎಂಟು ಸ್ಪರ್ಧಾತ್ಮಕ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಪಾಕಿಸ್ತಾನ, ಭಾರತ, ನ್ಯೂಜಿಲೆಂಡ್, ಬಾಂಗ್ಲಾದೇಶ ತಂಡಗಳಿವೆ. ಬಿ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್ ಸೇರಿವೆ. ಭಾರತವು ಫೆಬ್ರವರಿ 23 ರಂದು ದುಬೈನಲ್ಲಿ ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಇದನ್ನೂ ಓದಿ: ಷರತ್ತು ವಿಧಿಸಿ ಹೈಬ್ರಿಡ್ ಮಾದರಿಗೆ ಪಾಕ್ ಒಪ್ಪಿಗೆ – ದುಬೈನಲ್ಲಿ ಭಾರತದ ಪಂದ್ಯ
Advertisement
ಎಂಟು ತಂಡಗಳ ಟೂರ್ನಿಯಲ್ಲಿ 15 ಪಂದ್ಯಗಳು ನಡೆಯಲಿದ್ದು, ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿವೆ ಎಂದು ಐಸಿಸಿ ತಿಳಿಸಿದೆ. ಪಾಕಿಸ್ತಾನದಲ್ಲಿ ರಾವಲ್ಪಿಂಡಿ, ಲಾಹೋರ್ ಮತ್ತು ಕರಾಚಿ ಪಂದ್ಯಾವಳಿಗಳು ನಡೆಯಲಿವೆ.
ಭಾರತ ಫೈನಲ್‌ಗೆ ಅರ್ಹತೆ ಪಡಯದೇ ಇದ್ದರೆ, ಮಾರ್ಚ್ 9ರ ಪಂದ್ಯ ಲಾಹೋರ್‌ನಲ್ಲಿ ನಡೆಯಲಿದೆ. ಒಂದು ವೇಳೆ, ಅರ್ಹತೆ ಪಡೆದರೆ ದುಬೈನಲ್ಲಿ ಪಂದ್ಯ ಫೈನಲ್ ನಡೆಯಲಿದೆ. ಸೆಮಿಫೈನಲ್ ಮತ್ತು ಫೈನಲ್ ಎರಡೂ ಮೀಸಲು ದಿನಗಳನ್ನು ಹೊಂದಿರುತ್ತದೆ. ಭಾರತವನ್ನು ಒಳಗೊಂಡ ಮೂರು ಗುಂಪು ಪಂದ್ಯಗಳು ಮತ್ತು ಮೊದಲ ಸೆಮಿಫೈನಲ್ ಪಂದ್ಯ ದುಬೈನಲ್ಲಿ ನಡೆಯಲಿದೆ. ಇದನ್ನೂ ಓದಿ: ಭಾರತಕ್ಕೂ ಮೊದಲೇ ಚಾಂಪಿಯನ್ಸ್ ಟ್ರೋಫಿ ಬಾಯ್ಕಾಟ್ ಮಾಡ್ಬೇಕು – ಪಾಕ್ ಹೊಸ ಕ್ಯಾತೆ