Champions Trophy: ರೋಹಿತ್‌ ಶರ್ಮಾ ಪಾಕಿಸ್ತಾನಕ್ಕೆ ಹೋಗಲ್ಲ – ಬಿಸಿಸಿಐ ಸ್ಪಷ್ಟ ಸಂದೇಶ

Public TV
1 Min Read
Rohit Sharma

ಮುಂಬೈ: ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ (Rohit Sharma) ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿದೆ.

ರೋಹಿತ್ ಶರ್ಮಾ ಪಾಕಿಸ್ತಾನಕ್ಕೆ ಪ್ರಯಾಣಿಸುತ್ತಾರೋ ಇಲ್ಲವೋ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಅದಕ್ಕೀಗ ಬಿಸಿಸಿಐ ತೆರೆ ಎಳೆದಿದೆ. ನಾಯಕನ ಭೇಟಿ ಮತ್ತು ಫೋಟೋಶೂಟ್‌ಗಾಗಿ ರೋಹಿತ್ ಶರ್ಮಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ದೃಢ ನಿರ್ಧಾರ ತೆಗೆದುಕೊಂಡಿದೆ ಎಂದು ಗೌರವ್‌ ಗುಪ್ತ ತಿಳಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಭಾರತ VS ಇಂಗ್ಲೆಂಡ್‌ ಟಿ20 ಕದನ – ಶುಭಾರಂಭದ ನಿರೀಕ್ಷೆಯಲ್ಲಿ ಸೂರ್ಯನ ಸೈನ್ಯ

ICC Champions Trophy

ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ನಿರಾಕರಿಸಿದ ನಂತರ, ಟೂರ್ನಮೆಂಟ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗಿದೆ. ರೋಹಿತ್ ಶರ್ಮಾ ಟೂರ್ನಮೆಂಟ್ ಪೂರ್ವ ನಾಯಕರ ಸಭೆಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವ ಬಗ್ಗೆ ಕೆಲವು ಪ್ರಶ್ನೆಗಳು ಉದ್ಭವಿಸಿದ್ದವು.

ಎಲ್ಲಾ ತಂಡಗಳ ನಾಯಕರು ಯಾವುದೇ ಐಸಿಸಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಮೊದಲು ಒಟ್ಟುಗೂಡುತ್ತಾರೆ. ಅವರ ಯೋಜನೆಗಳು ಮತ್ತು ಗುರಿಗಳ ಬಗ್ಗೆ ಮಾತನಾಡುತ್ತಾರೆ. ಆದರೆ, ಸೆಕ್ಯೂರಿಟಿ ದೃಷ್ಟಿಯಿಂದ ಟೀಂ ಇಂಡಿಯಾ ಆಟಗಾರರನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ಒಪ್ಪಿಗೆ ಸೂಚಿಸಿಲ್ಲ. ಇದನ್ನೂ ಓದಿ: ಜ.22ರಿಂದ ಭಾರತ Vs ಇಂಗ್ಲೆಂಡ್‌ ಹೈವೋಲ್ಟೇಜ್‌ ಸರಣಿ – ಇಲ್ಲಿದೆ ಡಿಟೇಲ್ಸ್

Share This Article