ಅಬುಧಾಬಿ: 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಾ.2ರಂದು ನಡೆಯಲಿರುವ ಭಾರತ ಹಾಗೂ ನ್ಯೂಜಿಲೆಂಡ್ ಪಂದ್ಯಕ್ಕೆ ಶುಭಮನ್ ಗಿಲ್ (Shubman Gill) ನಾಯಕತ್ವ ವಹಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಭಾನುವಾರ ನಡೆಯಲಿರುವ ಗ್ರೂಪ್ `ಎ’ ಅಂತಿಮ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ ಫೆ.23 ರಂದು ನಡೆದ ಭಾರತ ಹಾಗೂ ಪಾಕಿಸ್ತಾನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿದ್ದರು. ಈ ಹಿನ್ನೆಲೆ ರೋಹಿತ್ ಶರ್ಮಾ ಪಂದ್ಯದಿಂದ ಹೊರಗುಳಿಯುವ ನಿರ್ಧಾರ ಕೈಗೊಂಡಲ್ಲಿ ಶುಭಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸುವಸಾಧ್ಯತೆಯಿದೆ.ಇದನ್ನೂ ಓದಿ:ಕಾಪು ಶ್ರೀಹೊಸ ಮಾರಿಗುಡಿ ಕಂಡು ನಿಬ್ಬೆರಗಾದ ನಟಿ ಶಿಲ್ಪಾ ಶೆಟ್ಟಿ
Advertisement
Advertisement
ಜ.18 ಘೋಷಣೆಯಾದ ಚಾಂಪಿಯನ್ಸ್ ಟ್ರೋಫಿಯ ಭಾರತ ತಂಡದಲ್ಲಿ ನಾಯಕನಾಗಿ ರೋಹಿತ್ ಶರ್ಮಾ ಹಾಗೂ ಉಪನಾಯಕನಾಗಿ ಶುಭಮನ್ ಗಿಲ್ ಆಯ್ಕೆಯಾಗಿದ್ದರು. ಇದೀಗ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಶುಭಮನ್ ಗಿಲ್ ನಾಯಕತ್ವ ವಹಿಸುವ ಸಾಧ್ಯತೆಗಳಿವೆ.
Advertisement
ಕಳೆದ ವರ್ಷ ಜುಲೈನಲ್ಲಿ ಜಿಂಬಾಬ್ವೆ ವಿರುದ್ಧದ 5 ಟಿ20 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸುವ ಮೂಲಕ ಶುಭಮನ್ ಗಿಲ್ ನಾಯಕತ್ವಕ್ಕೆ ಪಾದಾರ್ಪಣೆ ಮಾಡಿದ್ದರು. ಇದೀಗ ಮೊದಲ ಬಾರಿಗೆ ಏಕದಿನ ಪಂದ್ಯದಲ್ಲಿ ನಾಯಕತ್ವ ವಹಿಸುವ ಸಾಧ್ಯತೆಗಳಿವೆ. ಇತ್ತೀಚಿನ ದಿನಗಳಲ್ಲಿ ಭರ್ಜರಿ ಫಾರ್ಮ್ನಲ್ಲಿರುವ ಗಿಲ್, ಐಸಿಸಿ ಏಕದಿನ ಬ್ಯಾಟ್ಸ್ಮನ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ ಮತ್ತು 2025ರಲ್ಲಿ ಇದುವರೆಗೆ ಆಡಿದ 50 ಓವರ್‌ಗಳ 5 ಪಂದ್ಯಗಳಲ್ಲಿ 2 ಶತಕ ಮತ್ತು 2 ಅರ್ಧಶತಕಗಳಿಂದ ಒಟ್ಟು 406 ರನ್ ಗಳಿಸಿದ್ದಾರೆ.
Advertisement
ಬಾಂಗ್ಲಾದೇಶ ಮತ್ತು ಪಾಕಿಸ್ತಾನ ವಿರುದ್ಧ ಆಡಿದ ಮೊದಲ ಎರಡು `ಗ್ರೂಪ್ ಎ’ ಪಂದ್ಯಗಳಲ್ಲಿ ಗೆದ್ದು ಭಾರತ ಈಗಾಗಲೇ 2025ರ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ, ಗಿಲ್ ಅಜೇಯರಾಗಿ 101 ಗಳಿಸಿದ್ದರು. ಈ ಮೂಲಕ 46.3 ಓವರ್‌ಗಳಲ್ಲಿ 229 ರನ್‌ಗಳ ಗುರಿಯನ್ನು ತಲುಪಲು ಸಹಾಯ ಮಾಡಿದರು ಮತ್ತು ಭಾನುವಾರ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ, ವಿರಾಟ್ ಕೊಹ್ಲಿ 100 ರನ್ ಗಳಿಸಿ ಅಜೇಯರಾಗಿ ಉಳಿದರು. ಈ ಮೂಲಕ 42.3 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 242 ರನ್‌ಗಳನ್ನು ಬೆನ್ನೆಟ್ಟಿತು.ಇದನ್ನೂ ಓದಿ: ಸಿಎಂ, ಕಾಂಗ್ರೆಸ್ ಹೆದರಿಸಲು ಡಿಕೆಶಿ ಹಿಂದುತ್ವದ ವೇಷ ಹಾಕಿದ್ದಾರೆ: ಮುನಿರತ್ನ