ಚಾಮರಾಜನಗರ: ಇಲ್ಲಿನ ಚಾಮುಲ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ.
ಕಾಂಗ್ರೆಸ್ 4 ಸ್ಥಾನಗಳನ್ನು ಗೆದ್ದಿದ್ದು, ಬಿಜೆಪಿ 2 ಸ್ಥಾನಗಳಲ್ಲಷ್ಟೇ ಜಯ ಸಾಧಿಸಿದೆ. ಪಕ್ಷೇತರ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಜೆಡಿಎಸ್ 1 ಸ್ಥಾನಕ್ಕೆ ಸೀಮಿತವಾಗಿದ್ದು, ಗುಂಡ್ಲುಪೇಟೆ ಕ್ಷೇತ್ರದ ಬಿಜೆಪಿ ಶಾಸಕ ನಿರಂಜನಕುಮಾರ್‌ಗೆ ಮುಖಭಂಗ ಆಗಿದೆ. ಇದನ್ನೂ ಓದಿ: ರಾಯಚೂರು ನಗರಸಭೆ ಕಲುಷಿತ ನೀರಿಗೆ ಮತ್ತೊಂದು ಬಲಿ – ಸಾವಿನ ಸಂಖ್ಯೆ 6ಕ್ಕೆ ಏರಿಕೆ
Advertisement
ಬಿಜೆಪಿ ಬಂಡಾಯ ಅಭ್ಯರ್ಥಿ ಸುನೀಲ್, ಕಾಂಗ್ರೆಸ್ ಅಭ್ಯರ್ಥಿ ನಂಜುಂಡ ಪ್ರಸಾದ್ ಭರ್ಜರಿ ಜಯ ಸಾಧಿಸಿದ್ದಾರೆ. ಹಾಗೆಯೇ ಮಹಿಳಾ ಕ್ಷೇತ್ರದಲ್ಲಿ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಪುತ್ರಿ ಶೀಲಾ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಅಡ್ಡಮಾರ್ಗ ಹಿಡಿದ ಕಾಂಗ್ರೆಸ್ ನಾಪತ್ತೆಯಾಗುತ್ತೆ: ಆರಗ ಜ್ಞಾನೇಂದ್ರ
Advertisement
ಮತದಾನಕ್ಕೂ ಮುನ್ನ ಔತಣಕೂಟ: ಚಾಮುಲ್ ಚುನಾವಣೆಗೆ ಸಂಬಂಧಿಸಿದಂತೆ ಮತದಾನಕ್ಕೂ ಮುನ್ನವೇ ಔತಣಕೂಟ ಏರ್ಪಡಿಸಿದ್ದ ಗುಂಡ್ಲುಪೇಟೆ ತಾಲೂಕಿನ ಶಾಸಕ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Advertisement
Advertisement
ಚುನಾವಣಾಧಿಕಾರಿ ಶ್ರೀಧರ್ ನೀಡಿದ ದೂರಿನ ಅನ್ವಯ ಬಿಜೆಪಿ ಶಾಸಕ ನಿರಂಜನ್ ಕುಮಾರ್, ಅಭ್ಯರ್ಥಿ ಮೈ.ವಿ.ರವಿಶಂಕರ್ ಹಾಗೂ ಮುಖಂಡ ಸಿದ್ಧನಾಯಕ ವಿರುದ್ಧ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.