ಮೈಸೂರು: ಚಾಮುಂಡಿ ಬೆಟ್ಟ (Chamundi Hill) ನಮ್ಮ ಸಂಸ್ಥಾನಕ್ಕೆ ಸೇರಿದ್ದು ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ (Yaduveer Krishnadatta Chamaraja Wadiyar) ಹೇಳಿದ್ದಾರೆ.
ಕರ್ನಾಟಕ ಸರ್ಕಾರ (Karnataka Government) ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿ ಜೊತೆ ಅವರು ಮಾತನಾಡಿದರು. ಇದನ್ನೂ ಓದಿ: ಸಂಪನ್ಮೂಲದ ಗ್ಯಾರಂಟಿ ಇಲ್ಲದೇ ತಂದ ಗ್ಯಾರಂಟಿ ಯೋಜನೆಗಳನ್ನು ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ: ಅಶೋಕ್
ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಾಧಿಕಾರದ ರಚನೆ ಅಗತ್ಯವಿಲ್ಲ. ದೇವಸ್ಥಾನದ (Temple) ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಪರೋಕ್ಷವಾಗಿ ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಹೇಳಿದರು.
ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರಿಗೆ ಅಮೆರಿಕ ವೀಸಾ ನಿರಾಕರಣೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಅರುಣ್ ಜೊತೆ ಮಾತನಾಡಿದ್ದೇನೆ. ಯಾವ ಕಾರಣಕ್ಕೆ ವೀಸಾ ತಿರಸ್ಕೃತವಾಗಿದೆ ಎನ್ನುವುದು ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಕೇಂದ್ರ ಸಚಿವರ ಜೊತೆಯೂ ಮಾತನಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಬಾಲ ರಾಮನ ಮೂರ್ತಿ ಕೆತ್ತಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಮೆರಿಕ ವೀಸಾ ನಿರಾಕರಣೆ