ಮೈಸೂರು: ಶ್ರಾವಣ ಮಾಸದ ಎರಡನೇ ಶುಕ್ರವಾರ ದಿನವಾದ ಇಂದು ವರಮಹಾಲಕ್ಷ್ಮೀ ಹಬ್ಬವನ್ನು ರಾಜ್ಯದೆಲ್ಲೆಡೆ ಬಹಳ ಸಡಗರದಿಂದ ಜನರು ಆಚರಿಸುತ್ತಿದ್ದಾರೆ. ಹಬ್ಬದ ವಿಶೇಷ ದಿನವಾದ ಇಂದು ಮೈಸೂರು ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬರುತ್ತಿರುವುದರಿಂದ ಮೂರು ದಿನ ಚಾಮುಂಡಿ ಬೆಟ್ಟಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ.
Advertisement
ವರಮಹಾಲಕ್ಷ್ಮೀ ಹಬ್ಬದ ದಿನ ಸಾಮಾನ್ಯವಾಗಿ ದೇವಿಯ ದರ್ಶನಕ್ಕಾಗಿ ಹೆಚ್ಚಾಗಿ ಭಕ್ತರು ಮುಗಿಬೀಳುತ್ತಾರೆ. ಈ ವಿಶೇಷ ದಿನದಂದು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವ ಕಾರಣ ಕೊರೊನಾ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು ಜಿಲ್ಲಾಡಳಿತ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಿದೆ. ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಶಿವಣ್ಣ
Advertisement
Advertisement
ಈಗಾಗಲೇ ಕೊರೊನಾದಿಂದ ವೀಕೆಂಡ್ ಕರ್ಫ್ಯೂ ಹಾಗೂ ಭಾನುವಾರ ಬೆಟ್ಟಕ್ಕೆ ನಿರ್ಬಂಧ ಹೇರಲಾಗಿದೆ. ಜೊತೆಗೆ ಶ್ರಾವಣ ಶನಿವಾರ ಹಿನ್ನಲೆ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿಯಾಗಿರುವ ವಿವಿಪುರಂನ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೂ ಪ್ರವೇಶವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ:ಚಾಮುಂಡಿ ಬೆಟ್ಟಕ್ಕೆ ಡಿ ಬಾಸ್ ಭೇಟಿ- ಮುಗಿಬಿದ್ದ ಅಭಿಮಾನಿಗಳು
Advertisement