ಮೈಸೂರು: ಸತತ 10 ದಿನಗಳಿಂದ ಬಿದ್ದ ಭಾರೀ ಮಳೆಯ ಪರಿಣಾಮ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ದುರಸ್ತಿ ಕಾರ್ಯ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿಗಳಿಗೆ ಸಹಕಾರ ಸಚಿವ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಖಡಕ್ ಸೂಚನೆ ನೀಡಿದ್ದಾರೆ.
Advertisement
ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಚಾಮುಂಡಿಬೆಟ್ಡದಲ್ಲಿ ಬೃಹತ್ ನಂದಿ ಪ್ರತಿಮೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ರಸ್ತೆ ಹಾನಿಗೀಡಾಗಿರುವುದು ದುರದೃಷ್ಟಕರ. ಜಿಲ್ಲಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಮುಂದಾಗಬಹುದಾದ ಅನಾಹುತ ತಪ್ಪಿಸಲು ಕೂಡಲೇ ಆ ರಸ್ತೆ ಸಂಚಾರವನ್ನು ಬಂದ್ ಮಾಡಿ, ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಆದಷ್ಟು ಶೀಘ್ರದಲ್ಲಿ ನಾನು ಬಂದು ಪರಿಶೀಲಿಸುತ್ತೇನೆ. ದುರಸ್ತಿ ಕಾರ್ಯವನ್ನು ಸಮರೋಪಾದಿಯಲ್ಲಿ ತೆಗೆದುಕೊಂಡು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕೆಂದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಮಧ್ಯರಾತ್ರಿ ಸಿಎಂಗೆ ಝೀರೋ ಟ್ರಾಫಿಕ್ – ಅರ್ಧಗಂಟೆ ಸರ್ವಿಸ್ ರಸ್ತೆಯಲ್ಲಿ ನಿಂತ ವಾಹನಗಳು
Advertisement
Advertisement
ಕಳೆದ ಕೆಲದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸಹಿತ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದಲ್ಲಿ ಮತ್ತೆ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಭಾರೀ ಮಳೆ – ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ
Advertisement