– ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನೋ ಎಂಟ್ರಿ
– ಭಕ್ತರಿಗೆ ಉಚಿತ ಪ್ರಯಾಣಕ್ಕೆ 50 ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ
ಮೈಸೂರು: ಚಾಮುಂಡಿ ಬೆಟ್ಟದಲ್ಲಿ (Chamundi Hills) ಮೊದಲ ಆಷಾಢ ಶುಕ್ರವಾರದ (Ashada Friday) ಸಂಭ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಬೆಟ್ಟಕ್ಕೆ ಪ್ರತಿ ಆಷಾಢ ಶುಕ್ರವಾರದಂದು ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ. ಅಂತೆಯೇ ಈ ಬಾರಿಯೂ ಖಾಸಗಿ ಬಸ್‌ಗಳಿಗೆ ನಿರ್ಬಂಧ ವಿಧಿಸಿದ್ದು, ಸರ್ಕಾರಿ ಬಸ್ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಆಷಾಢ ಪೂಜಾ ಕೈಂಕರ್ಯಗಳಿಗೆ ಸಿದ್ಧತೆ ಜೋರಾಗಿದೆ.
Advertisement
ಆಷಾಢ ಶುಕ್ರವಾರ ಬಂದ್ರೆ ಸಾಕು ಅರಮನೆ ನಗರಿ ಮೈಸೂರು (Mysuru) ಹಾಗೂ ಚಾಮುಂಡಿ ಭಕ್ತರಿಗೆ ಸಂಭ್ರಮವೋ ಸಂಭ್ರಮ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ನಾಳೆ ನಾಡದೇವತೆ, ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ನಾಳೆ ಮುಂಜಾನೆ 3 ಗಂಟೆ 30 ನಿಮಿಷಕ್ಕೆ ಅಭಿಷೇಕದೊಂದಿಗೆ ಆರಂಭವಾಗುವ ವಿವಿಧ ರೀತಿಯ ಪೂಜಾ ಕೈಂಕರ್ಯ ಎರಡು ಗಂಟೆಗಳ ಕಾಲ ನಿರಂತರವಾಗಿ ನಡೆಯಲಿವೆ. ನಾಳೆ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಿ ಬಳಿಕ 5 ಗಂಟೆ 30 ನಿಮಿಷಕ್ಕೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ. ಇದನ್ನೂ ಓದಿ: ಮೈಸೂರಿನ ಶ್ರೀಗಂಧದ ಪೆಟ್ಟಿಗೆಯಲ್ಲಿ ಬೈಡನ್‌ಗೆ ಉಡುಗೊರೆ – ಮೋದಿ ಕೊಟ್ಟ ಗಿಫ್ಟ್ ಬಾಕ್ಸ್‌ನಲ್ಲಿ ಏನಿದೆ?
Advertisement
Advertisement
ಆಷಾಢ ಶುಕ್ರವಾರದ ಪೂಜೆಗೆ ಚಾಮುಂಡಿಬೆಟ್ಟದಲ್ಲಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕಿರಿದಾದ ಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಬಾರದೆಂದು ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಹೋಗಲು ಭಕ್ತರಿಗೆ ಜಿಲ್ಲಾಡಳಿತ 50 ಕೆಎಸ್ಆರ್‌ಟಿಸಿ ಬಸ್ಸಿನ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ನಗರದ ಲಲಿತಮಹಲ್ ಹೆಲಿಪ್ಯಾಡ್ ಸಮೀಪದಿಂದ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಾ ಮಹಲ್ ಪ್ಯಾಲೆಸ್ ಹೆಲಿಪ್ಯಾಡ್‌ನಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ 300 ಮತ್ತು 50 ರೂಪಾಯಿ ಟಿಕೆಟ್ ಇರಲಿದೆ.
Advertisement
ಪ್ರಸಾದ ಕೌಂಟರ್‌ಗಳಲ್ಲಿ ಫುಡ್ ಸೇಫ್ಟಿ ಆಫೀಸರ್‌ಗಳ ತಂಡ ಇರಲಿದೆ. ದೊಡ್ಡ ಮಟ್ಟದಲ್ಲಿ ಪ್ರಸಾದ ವಿತರಣೆ ಮಾಡುವವರು ಫುಡ್ ಸೇಫ್ಟಿ ಆಫೀಸರ್ ಬಳಿ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ. ಇದನ್ನೂ ಓದಿ: 13 ಬಾರಿ ಬಜೆಟ್ ಕೊಟ್ಟ ಕೂಡಲೇ ಗದ್ದೆಯಲ್ಲಿ ಭತ್ತ ಬೆಳೆದು ಅಕ್ಕಿ ಕೊಡೋಕೆ ಆಗಲ್ಲ: ಸಿದ್ದುಗೆ ಡಿವಿಎಸ್ ಟಾಂಗ್
ಆಷಾಢ ಶುಕ್ರವಾರದಂದು ಶಕ್ತಿ ದೇವತೆಯನ್ನು ಪೂಜಿಸಿದವರಿಗೆ ವಿಘ್ನಗಳು ನಿರವಾರಣೆಯಾಗಿ, ಇಷ್ಠಾರ್ಥ ಸಿದ್ಧಿಸುತ್ತದೆ ಅನ್ನೋ ನಂಬಿಕೆಯಿದೆ. ಈ ನಿಟ್ಟಿನಲ್ಲಿ ಮೈಸೂರು ಮಾತ್ರವಲ್ಲದೆ ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದ ಲಕ್ಷಾಂತರ ಭಕ್ತರು ಸಹ ಆಗಮಿಸುತ್ತಿದ್ದಾರೆ. ಒಟ್ಟಾರೆ ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಆಷಾಢ ಮಾಸದ ಪೂಜೆಗೆ ಸಿದ್ಧತೆ ಜೋರಾಗಿ ನಡೆದಿದೆ.