ಬೆಂಗಳೂರು: ಯುವ ದಸರಾ ವೇದಿಕೆ ಮೇಲೆ ನಿವೇದಿತಾ ಗೌಡ ತಮ್ಮ ಪ್ರೀತಿಯನ್ನು ಒಪ್ಪಿಕೊಂಡಿದ್ದಕ್ಕೆ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಫುಲ್ ಖುಷಿಯಲ್ಲಿದ್ದು, ನನ್ನ ಪ್ರೀತಿಯನ್ನು ಒಪ್ಪಿಕೊಂಡಿದ್ದಕ್ಕೆ ಧನ್ಯವಾದ ಎಂದು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ನಾನು ಎಂದೆಂದಿಗೂ ನಿನ್ನನ್ನು ಪ್ರೀತಿಸುತ್ತೇನೆ, ನನ್ನ ಪ್ರೀತಿಯನ್ನು ಒಪ್ಪಿಕೊಂಡಿದ್ದಕ್ಕೆ ಧನ್ಯವಾದ. ಜೊತೆಗೆ ನಮ್ಮ ಪ್ರೀತಿಗೆ ಬೆಂಬಲಿಸಿ, ಆಶೀರ್ವದಿಸಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತಿದ್ದೇನೆ ಎಂದು ಬರೆದು ತಾವು ಯುವ ದಸರಾ ವೇದಿಕೆ ಮೇಲೆ ನಿವೇದಿತಾಗೆ ಪ್ರಪ್ರೋಸ್ ಮಾಡುತ್ತಿರುವ ಫೋಟೋ ಹಾಕಿ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದನ್ನೂ ಓದಿ: ಯುವದಸರಾ ವೇದಿಕೆಯಲ್ಲಿ ಒಂದಾದ ಬಿಗ್ಬಾಸ್ ಜೋಡಿ – ನಿವೇದಿತ ಗೌಡಗೆ ಉಂಗುರ ತೊಡಿಸಿದ ಚಂದನ್ ಶೆಟ್ಟಿ
Advertisement
https://www.instagram.com/p/B3RqeK7FNMR/
Advertisement
ಈ ಪೋಸ್ಟ್ ಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಅಭಿಮಾನಿಗಳು ಕಮೆಂಟ್ ಮಾಡಿ ಕ್ಯೂಟ್ ಜೋಡಿಗೆ ಶುಭಕೋರಿದ್ದಾರೆ. ಕೆಲವರು ಯಾರು ಏನೇ ಹೇಳಿದರು ತಲೆಕೆಡಿಸಿಕೊಳ್ಳಬೇಡಿ, ನಿಮ್ಮ ಜೋಡಿ ಸೂಪರ್ ಎಂದು ಕಮೆಂಟ್ ಮಾಡಿ ಸಪೋರ್ಟ್ ಮಾಡಿದ್ದಾರೆ. ಇದನ್ನೂ ಓದಿ: ವೇದಿಕೆ ಮೇಲೆ ಮದುವೆ ಆಗಿದ್ರೆ ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ: ನಿವೇದಿತಾ ಗೌಡ
Advertisement
ಯುವ ದಸರಾ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ-ನಿವೇದಿತಾಗೌಡ ಎಂಗೇಜ್ ಆಗಿದ್ದು, ಝಗಮಗಿಸುವ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಬೆರಳಿಗೆ ಉಂಗುರ ತೊಡಿಸಿ ನಿನ್ನನ್ನೇ ಮದುವೆಯಾಗುತ್ತೇನೆಂದು ಘೋಷಿಸಿಕೊಂಡಿದ್ದರು. ಸಾವಿರಾರು ಪ್ರೇಕ್ಷಕರ ಸಮ್ಮುಖದಲ್ಲಿ ಪ್ರೇಮ ನಿವೇದನೆ ಮಾಡಿದ್ದು ಯುವಜನತೆ ಬಿಗ್ಬಾಸ್ ಜೋಡಿಗೆ ಜೈಕಾರ ಹಾಕಿದ್ದರು.
Advertisement
ವೇದಿಕೆಯಲ್ಲಿ ಚಂದನ್ ಅವರು ನಿವೇದಿತಾಗೆ ಪ್ರಪೋಸ್ ಮಾಡಿದ ಬಳಿಕ ಈ ವಿಚಾರ ಭಾರೀ ವಿವಾದಕ್ಕಿಡಾಗಿತ್ತು. ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಇದು ಬೇಡವಾಗಿತ್ತು ಎಂದು ಅನೇಕರು ಖಂಡಿಸಿದ್ದರು. ಇನ್ನೂ ಕೆಲವರು ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಚಂದನ್, ನಾನು ಮಾಡಿರುವುದು ತಪ್ಪಾಗಿದ್ದರೆ ಕ್ಷಮಿಸಿ ಬಿಡಿ ಅಂದಿದ್ದರು. ಇತ್ತ ನಾವು ವೇದಿಕೆಯಲ್ಲಿ ಮದುವೆಯಾಗಿಲ್ಲ. ಒಂದು ವೇಳೆ ನಾವು ಅಲ್ಲಿ ಮದುವೆಯಾಗುತ್ತಿದ್ದರೆ ಅದನ್ನು ನಾನು ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ ಎಂದು ನಿವೇದಿತಾ ಸಮರ್ಥಿಸಿಕೊಂಡಿದ್ದರು. ಇದನ್ನೂ ಓದಿ: ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದೆಂಬ ರೂಲ್ಸ್ ಇದ್ಯಾ? ಪ್ರಮೋದ್ ಮುತಾಲಿಕ್
ಇನ್ನೊಂದೆಡೆ ಇದು ನಮಗೆ ಸರ್ಪ್ರೈಸ್ ತಂದಿದೆ. ನಾವು ಕಾರ್ಯಕ್ರಮ ನೋಡಲೆಂದು ಹೋಗಿದ್ದೇವು ಅಷ್ಟೇ. ಅಲ್ಲಿ ಈ ರೀತಿ ಆಗಿರೋದು ಆಶ್ಚರ್ಯದ ಜೊತೆಗೆ ಖುಷಿಯನ್ನು ಕೂಡ ತಂದಿದೆ ಎಂದು ನಿವೇದಿತಾ ಪೋಷಕರು ಹೇಳಿದ್ದರು.