ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಅಭ್ಯರ್ಥಿ ಕುಲದೀಪ್ ಕುಮಾರ್ ಅವರನ್ನು ಚಂಡೀಗಢದ ಚುನಾಯಿತ (Chandigarh Mayor Polls) ಮೇಯರ್ ಎಂದು ಸುಪ್ರೀಂ ಕೋರ್ಟ್ (Supreme Court) ಘೋಷಿಸಿದೆ.
8 ಅಸಿಂಧು ಮತಗಳನ್ನು ಸೇರಿಸಿ ಮತಗಳ ಮರುಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಮರು ಎಣಿಕೆಯ ಬಳಿಕ ಫಲಿತಾಂಶ ಪ್ರಕಟಿಸಲಾಗಿದೆ. ಈ ಮೂಲಕ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯನ್ನು ಚುನಾಯಿತ ಮೇಯರ್ ಎಂದು ಘೋಷಿಸಲಾಗಿದೆ. ಇದನ್ನೂ ಓದಿ: ಅಮಿತ್ ಶಾ ವಿರುದ್ಧ ಮಾನನಷ್ಟ ಹೇಳಿಕೆ – ಯುಪಿ ಕೋರ್ಟ್‍ನಿಂದ ರಾಹುಲ್ ಗಾಂಧಿಗೆ ಜಾಮೀನು
ಮತಪತ್ರಗಳನ್ನು ತಿರುಚಿ ಬಿಜೆಪಿ ಅಭ್ಯರ್ಥಿಯನ್ನು ಮೇಯರ್ ಎಂದು ಘೋಷಿಸಿದ್ದ ರಿಟನಿರ್ಂಗ್ ಅಧಿಕಾರಿ ಅನಿಲ್ ಮಸೀಹ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಆದೇಶಿಸಿದೆ. ಇನ್ನೂ ಸೋಮವಾರ ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆ ವೇಳೆ ಅನಿಲ್ ಮೆಸಿಹ್ ಮತಪತ್ರಗಳನ್ನು ತಿರುಚಿದ್ದನ್ನು ಒಪ್ಪಿಕೊಂಡಿದ್ದರು. ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಜಾಪ್ರಭುತ್ವವನ್ನು ಸುಪ್ರೀಂ ಕೋರ್ಟ್ ಉಳಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಾರ್ಚ್ ತಿಂಗಳಲ್ಲಿ ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಒಡವೆ ಹಸ್ತಾಂತರ: ಕೋರ್ಟ್‌ನಿಂದ ದಿನಾಂಕ ನಿಗದಿ