ಚಂಡೀಗಢ: ಹಾಸ್ಟೆಲ್ ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ (leaked objectional videos) ಪ್ರಕರಣವು ವ್ಯಾಪಕ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಚಂಗೀಗಢ ವಿಶ್ವವಿದ್ಯಾಲಯವನ್ನು (Chandigarh University) ಐದು ದಿನ ಬಂದ್ ಮಾಡಲಾಗಿದೆ.
ಚಂಡೀಗಢ ವಿವಿಯನ್ನು ಸೆ.24ರವರೆಗೆ ಬಂದ್ ಮಾಡಲಾಗಿದೆ. ಪ್ರಕರಣ ಬೆಳಕಿಗೆ ಬಂದಾಗಿನಿಂದ ವಿದ್ಯಾರ್ಥಿನಿಯರು ಭಯಭೀತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕರು ಹಾಸ್ಟೆಲ್ ತೊರೆದು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಲಗೇಜ್ ಪ್ಯಾಕ್ ಮಾಡಿಕೊಂಡು ವಿದ್ಯಾರ್ಥಿನಿಯರು ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ ಕೇಸ್ – ಹುಡುಗಿಯ ಬಾಯ್‌ಫ್ರೆಂಡ್ ಸಹ ಅರೆಸ್ಟ್
Advertisement
Advertisement
ಸ್ನಾನದ ವೀಡಿಯೋ ಲೀಕ್ ಮಾಡಿದ ವಿದ್ಯಾರ್ಥಿನಿ ಹಾಗೂ ಆಕೆಯ ಬಾಯ್‌ಫ್ರೆಂಡ್‌ನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಮತ್ತೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Advertisement
Advertisement
ಪ್ರಕರಣ ಕುರಿತು ಬೇಸರ ವ್ಯಕ್ತಪಡಿಸಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagawant mann), ತನಿಖೆಗೆ ಆದೇಶಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೂ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಲೀಕ್ ಪ್ರಕರಣ – ನಾಳೆಯಿಂದ 2 ದಿನ ವಿಶ್ವವಿದ್ಯಾಲಯ ಬಂದ್