ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ ಪ್ರಕರಣ – ಬಾಯ್‌ಫ್ರೆಂಡ್‌ಗೆ ಹೆದರಿ ವೀಡಿಯೋ ಮಾಡಿದ್ಲು ಸಹಪಾಠಿ

Advertisements

ಚಂಡೀಗಢ: ಮೊಹಾಲಿಯಲ್ಲಿರುವ ಚಂಡೀಗಢ ವಿವಿಯ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಲೀಕ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸಹ ವಿದ್ಯಾರ್ಥಿನಿಯ ಬಾಯ್‌ಫ್ರೆಂಡ್ ಬೆದರಿಕೆ ಹಾಕಿದ್ದರಿಂದಲೇ ಇತರ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಸೆರೆ ಹಿಡಿದು ಹಂಚಿಕೊಂಡಿದ್ದಾಳೆ ಎಂಬ ಸಂಗತಿ ತನಿಖೆ ವೇಳೆ ಬಯಲಾಗಿದೆ.

Advertisements

ಆರೋಪಿಗಳಾದ ಸನ್ನಿ ಮೆಹ್ತಾ ಮತ್ತು ಆತನ ಸ್ನೇಹಿತ ರಂಕಜ್ ವರ್ಮಾ, ಹಾಸ್ಟೆಲ್‌ನ ಸಾಮಾನ್ಯ ಶೌಚಗೃಹದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರ ಬೆತ್ತಲೆ ದೃಶ್ಯಗಳನ್ನು ಚಿತ್ರೀಕರಿಸಿ, ಹಂಚಿಕೊಳ್ಳದಿದ್ದರೇ ನಿನ್ನ ಖಾಸಗಿ ವೀಡಿಯೋಗಳನ್ನ ವೈರಲ್ ಮಾಡುವುದಾಗಿ ಆರೋಪಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದರು. ಆದ್ದರಿಂದಲೇ ಸಹ ವಿದ್ಯಾರ್ಥಿನಿ ಇತರರ ಖಾಸಗಿ ವೀಡಿಯೋಗಳನ್ನ ಸೆರೆ ಹಿಡಿದು ಹಂಚಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್‌ ಕೇಸ್‌ – ಹುಡುಗಿಯ ಬಾಯ್‌ಫ್ರೆಂಡ್‌ ಸಹ ಅರೆಸ್ಟ್‌

Advertisements

ಈ ಪ್ರಕರಣದಲ್ಲಿ ಪಂಜಾಬ್ ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ಮೂವರಲ್ಲಿ 23 ವರ್ಷದ ಆರೋಪಿಯೊಬ್ಬ ಬಂಧಿತ ವಿದ್ಯಾರ್ಥಿನಿಯ ಬಾಯ್‌ಫ್ರೆಂಡ್ ಎಂದು ತಿಳಿದುಬಂದಿದೆ. 31 ವರ್ಷದ ಇನ್ನೊಬ್ಬ ಆರೋಪಿ ಆತನ ಸ್ನೇಹಿತನಾಗಿದ್ದಾನೆ.

ಏನಿದು ಘಟನೆ? 
ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋವನ್ನು ಸಹ ವಿದ್ಯಾರ್ಥಿನಿಯೊಬ್ಬಳು ಸೆರೆಹಿಡಿದು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದಾಗಿ ಆರೋಪಿಸಲಾಗಿದೆ. ಈ ವೀಡಿಯೋವನ್ನು ಹರಿಬಿಟ್ಟ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೋ ಸೋರಿಕೆಯಾದ ಬೆನ್ನಲ್ಲೇ ಭಾರೀ ಪ್ರತಿಭಟನೆ ಭುಗಿಲೆದ್ದಿದ್ದು, ಈ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಚಂಡೀಗಢ ವಿವಿ ಬಳಿಕ ಐಐಟಿ ಬಾಂಬೆ- ಹಾಸ್ಟೆಲ್ ಸ್ನಾನಗೃಹದಲ್ಲಿ ಇಣುಕಿದ ಕ್ಯಾಂಟೀನ್ ಸಿಬ್ಬಂದಿ ಬಂಧನ

Advertisements

ವ್ಯಾಪಕ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಚಂಗೀಗಢ ವಿಶ್ವವಿದ್ಯಾಲಯವನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗಿದೆ. ಆದರೆ ಪ್ರಕರಣ ಬೆಳಕಿಗೆ ಬಂದಾಗಿನಿಂದ ವಿದ್ಯಾರ್ಥಿನಿಯರು ಭಯಭೀತರಾಗಿದ್ದು, ಹಾಸ್ಟೆಲ್ ತೊರೆದು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇನ್ನು ಇರುವ ವಿದ್ಯಾರ್ಥಿನಿಯರಂತು ಸ್ನಾನದ ಕೊಠಡಿಗಳನ್ನು ಬಳಸೋದಕ್ಕೆ ಹೆದರುತ್ತಿದ್ದಾರೆ. ಈ ಬೆನ್ನಲ್ಲೇ ತನಿಖೆಗೆ ವಿಶೇಷ ತಂಡ ನಿಯೋಜನೆ ಮಾಡುವುದಾಗಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

Live Tv

Advertisements
Exit mobile version