ಭೋಪಾಲ್: ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ಮಧ್ಯಪ್ರದೇಶದ ಜಬುವಾ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲಾ ಕೇಂದ್ರದಿಂದ 60 ಕಿ.ಮೀ ದೂರದಲ್ಲಿರುವ ತಾಂಡ್ಲಾ ಪಟ್ಟಣದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಈ ಕುರಿತಂತೆ ಪ್ರತಿಕ್ರಿಯಿಸಿದ ತಾಂಡ್ಲಾ ನಗರ ಪರಿಷತ್ತಿನ ಮುಖ್ಯ ಮುನ್ಸಿಪಲ್ ಅಧಿಕಾರಿ ಭರತ್ ಸಿಂಗ್ ಟ್ಯಾಂಕ್ ಅವರು, ಪ್ರಿಮೆಯ ಸಣ್ಣ ಭಾಗವನ್ನು ಹಾನಿ ಮಾಡಲಾಗಿದೆ. ಚಂದ್ರಶೇಖರ್ ಆಜಾದ್ ಅವರು ಹಿಡಿದುಕೊಂಡಿದ್ದ ಪಿಸ್ತೂಲಿನ ಭಾಗವನ್ನು ಧ್ವಂಸಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement
Advertisement
ಪೊಲೀಸರು ರಾತ್ರಿ ಹೊತ್ತು ಗಸ್ತು ತಿರುಗುತ್ತಿದ್ದ ವೇಳೆ ಪ್ರತಿಮೆಗೆ ಹಾನಿಯಾಗಿರುವುದನ್ನು ಗಮನಿಸಿದ್ದಾರೆ. ಇದೀಗ ಸಿಸಿಟಿವಿ ದೃಶ್ಯಗಳ ಮೂಲಕ ದುಷ್ಕರ್ಮಿಗಳನ್ನು ಗುರುತಿಸಲಾಗುತ್ತದೆ ಎಂದು ಸ್ಥಳೀಯ ಪೊಲೀಸ್ ಠಾಣೆ ಪ್ರಭಾರಿ ಕೌಶಲ್ಯ ಚೌಹಾಣ್ ಹೇಳಿದ್ದಾರೆ. ಇದನ್ನೂ ಓದಿ: ನೋ ಪಾರ್ಕಿಂಗ್ ಹಾವಳಿ ತಪ್ಪಿಸಲು ವ್ಹೀಲಿಂಗ್ ಕ್ಲಾಂಪ್ ಮೊರೆ- ಸ್ಥಳದಲ್ಲೇ ದಂಡ ವಸೂಲಿಗೆ ಪ್ಲಾನ್!
Advertisement
Advertisement
ಈ ವಿಚಾರವಾಗಿ ಸ್ಥಳೀಯ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಚಂದ್ರಶೇಖರ್ ಆಜಾದ್ ಅವರ ಪ್ರತಿಮೆಯನ್ನು 2017ರಲ್ಲಿ ಅನಾವರಣಗೊಳಿಸಲಾಗಿದೆ. ಇದನ್ನೂ ಓದಿ: ರಾಜ್ಯಾದ್ಯಂತ ವರುಣನ ಅಬ್ಬರಕ್ಕೆ 11 ಜೀವಗಳು ಬಲಿ – ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್