– ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆಂದು ಘೋಷಣೆ
ಬೀದರ್: ಕಾಂಗ್ರೆಸ್‌ನ (Congress) ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಗಡಿ ಜಿಲ್ಲೆ ಬೀದರ್‌ನ (Bidar) ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಅಶೊಕ್ ಖೇಣಿಗೆ (Ashok Kheny)ಟಿಕೆಟ್ ನೀಡಿದ್ದಕ್ಕೆ ಮಾಜಿ ಸಿಎಂ ಧರ್ಮಸಿಂಗ್ ಅಳಿಯ ಚಂದ್ರಾಸಿಂಗ್ (Chandra Singh) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೇರಿದಂತೆ ಎಲ್ಲಾ ನಾಯಕರು ಮುಂದಿನ ಬಾರಿ ಟಿಕೆಟ್ ಕೊಡುವುದಾಗಿ ಹೇಳಿ ಸಮಾಧಾನ ಮಾಡಿದ್ದರು. ಕಾಂಗ್ರೆಸ್‌ನಲ್ಲಿ ದಲ್ಲಾಳಿಗಳ ಕೆಲಸ ನಡೆಯುತ್ತಿದೆ. ಅಶೋಕ್ ಖೇಣಿಗೆ ಕಾಂಗ್ರೆಸ್ ಟಿಕೆಟ್ ಮಾರಿಕೊಂಡಿದ್ದಾರೆ. ಟಿಕೆಟ್ ಎಷ್ಟಕ್ಕೆ ಮಾರಿಕೊಂಡಿದ್ದೀರೀ ಎಂದು ನಾನು ಕಾಂಗ್ರೆಸ್ ನಾಯಕರಿಗೆ ಕೇಳಬೇಕು ಎಂದು ಹರಿಹಾಯ್ದರು. ಇದನ್ನೂ ಓದಿ: ನಾನು ಸಾವರ್ಕರ್ ಅಲ್ಲ, ಕ್ಷಮೆ ಕೇಳುವುದಿಲ್ಲ: ಅನರ್ಹತೆ ಕುರಿತು ರಾಹುಲ್ ಗಾಂಧಿ
ಈ ಬಾರಿ ನಾನು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಜಿಲ್ಲೆಯಿಂದ ಹಿಡಿದು ರಾಜ್ಯದ ನಾಯಕರು ಕುತಂತ್ರ ಮಾಡಿ ನನಗೆ ಟಿಕೆಟ್ ತಪ್ಪಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಹೊಸ ಮುಖಗಳು