ಚಂದ್ರಬಾಬು ನಾಯ್ಡುಗೆ 4 ವಾರಗಳ ಮಧ್ಯಂತರ ಜಾಮೀನು

Public TV
2 Min Read
CHANDRA BABU NAIDU

ಹೈದರಾಬಾದ್: ಆಂಧ್ರ ಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡುಗೆ (Chandrababu Naidu) ಆಂಧ್ರಪ್ರದೇಶ ಹೈಕೋರ್ಟ್ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬಹುಕೋಟಿ ಕೌಶಲಾಭಿವೃದ್ಧಿ ನಿಗಮ ಹಗರಣ (Skill Development Corporation Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಜೈಲಿನಲ್ಲಿದ್ದರು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಇದೀಗ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಅಕ್ಟೋಬರ್ 18 ರಂದು ಕುಟುಂಬದ ಸದಸ್ಯರು ಹಾಗೂ ಟಿಡಿಪಿ (TDP) ಮುಖಂಡರು ರಾಜಮಹೇಂದ್ರವರಂನ ಸೆಂಟ್ರಲ್ ಜೈಲಿಗೆ ತೆರಳಿದ್ದರು. ಪತ್ನಿ ಭುವನೇಶ್ವರಿ, ಪುತ್ರ ಲೋಕೇಶ್ ಮತ್ತು ಸೊಸೆ ಬ್ರಹ್ಮಣಿ ಅವರೊಂದಿಗೆ ಪಕ್ಷದ ಮುಖಂಡರಾದ ಚಿನರಾಜಪ್ಪ, ರಾಮಮೋಹನ್ ನಾಯ್ಡು, ಬುಚ್ಚಯ್ಯ ಚೌಧರಿ, ಕಲಾ ವೆಂಕಟರಾವ್ ಮತ್ತಿತರರು ನಾಯ್ಡು ಅವರನ್ನು ಭೇಟಿಯಾಗಿದ್ದರು. ಬಳಿಕ ನಾಯ್ಡು ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದರು.

Chandrababu Naidu

ಈ ಸಂಬಂಧ ಟಿಡಿಪಿ ನಾಯಕರು ಸುದ್ದಿಗಾರರೊಂದಿಗೆ ಮಾತನಾಡಿ, ನಾಯ್ಡು ಅವರನ್ನು ನೋಡಿ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಅವರ ಆರೋಗ್ಯ ಬಗ್ಗೆ ಚಿಂತಿತರಾಗಿದ್ದಾರೆ. ಹೀಗಾಗಿ ಅವರಿಗೆ ವೈದ್ಯಕೀಯ ಪರೀಕ್ಷೆಯ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸೂಚನೆಗಳನ್ನು ಜೈಲು ಅಧಿಕಾರಿಗಳಿಂದ ಲಿಖಿತ ರೂಪದಲ್ಲಿ ಕೇಳಿದ್ದೇವೆ. ಅಲ್ಲದೆ ಪತಿಯ ಅನಾರೋಗ್ಯ ಕುರಿತಾಗಿ ಭುವನೇಶ್ವರಿ ಕೂಡ ಪತ್ರ ಬರೆದಿದ್ದಾರೆ ಎಂದಿದ್ದರು. ಇದನ್ನೂ ಓದಿ: ಝಡ್ ಪ್ಲಸ್ ಭದ್ರತೆ ಇದ್ರೂ ಚಂದ್ರಬಾಬು ನಾಯ್ಡುಗೆ ಜೈಲಲ್ಲಿ ಸೊಳ್ಳೆ ಕಾಟ- ಡೆಂಗ್ಯೂ ಭೀತಿ

ಹೈದರಾಬಾದ್ ಮತ್ತು ವಿಜಯವಾಡದಲ್ಲಿ ಚಂದ್ರಬಾಬು ನಾಯ್ಡು ಅವರು ವೈದ್ಯರ ತಂಡವನ್ನು ಹೊಂದಿದ್ದಾರೆ. ಹೀಗಾಗಿ ನಾಯ್ಡು ಆರೋಗ್ಯದ ರಿಪೋರ್ಟ್‍ಗಳನ್ನು ಅವರಿಗೆ ಕಳುಹಿಸಿದರೆ ಅವರು ಸೂಕ್ತ ವೈದ್ಯಕೀಯ ಸಲಹೆ ನೀಡಲು ಸಾಧ್ಯವಾಗುತ್ತದೆ ಎಂದು ಟಿಡಿಪಿ ನಾಯಕರು ಹೇಳಿದ್ದರು.

ಕೌಶಲ್ಯ ಅಭಿವೃದ್ಧಿ ನಿಗಮದಿಂದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಸೆಪ್ಟೆಂಬರ್ 9 ರಂದು ಬಂಧಿಸಲಾಗಿತ್ತು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 300 ಕೋಟಿ ರೂ.ಗೂ ಹೆಚ್ಚು ನಷ್ಟವಾಗಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article