ಅಮರಾವತಿ: ಬರೋಬ್ಬರಿ 31 ತಿಂಗಳ ನಂತರ ಟಿಡಿಪಿಯ (TDP) ಚಂದ್ರಬಾಬು ನಾಯ್ಡು (Chandrababu Naidu) ಮುಖ್ಯಮಂತ್ರಿಯಾಗಿಯೇ ವಿಧಾನಸಭೆ (Vidhana Sabha) ಪ್ರವೇಶಿಸುವ ಮೂಲಕ ಪ್ರತಿಜ್ಞೆ ಈಡೇರಿಸಿದ್ದಾರೆ.
ವೈಎಸ್‌ಆರ್ ಪಕ್ಷದ ಮುಖಂಡರ ತೀವ್ರ ನಿಂದನೆಯಿಂದ ನೊಂದು ಕಣ್ಣೀರಿಟ್ಟಿದ್ದ ಚಂದ್ರಬಾಬು ನಾಯ್ಡು ಸಿಎಂ ಆಗಿಯೇ ಮತ್ತೆ ಆಂಧ್ರ ಪ್ರದೇಶ (Andhra Pradesh) ವಿಧಾನಸಭೆಗೆ ಕಾಲಿಡುವುದಾಗಿ 2021ರ ನವೆಂಬರ್‌ನಲ್ಲಿ ಶಪಥ ಮಾಡಿದ್ದರು. ಇದನ್ನೂ ಓದಿ: ಚಂದ್ರಬಾಬು ನಾಯ್ಡು ಅವರ ಸೂಪರ್ ಸಿಕ್ಸ್ ಗ್ಯಾರಂಟಿ ಘೋಷಣೆ ಜಾರಿಗೆ ಬೇಕು 60 ಸಾವಿರ ಕೋಟಿ!
Advertisement
ಇಂದು ಅಧಿವೇಶನ ಆರಂಭಕ್ಕೆ ಮುನ್ನ ವಿಧಾನಸಭೆಯ ಮೆಟ್ಟಿಲುಗಳಿಗೆ ಸಿಎಂ ಚಂದ್ರಬಾಬು ನಮಸ್ಕಾರ ಮಾಡಿದರು. ಸದನ ಪ್ರವೇಶಿಸುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು ಎದ್ದು ನಿಂತು ಚಂದ್ರಬಾಬು ನಾಯ್ಡು ಅವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸತ್ಯ ಗೆದ್ದಿದೆ. ಪ್ರಜಾಪ್ರಭುತ್ವ ಉಳಿದಿದೆ ಎಂದು ಟಿಡಿಪಿ ಶಾಸಕರು ಭಿತ್ತಿಪತ್ರ ಪ್ರದರ್ಶಿಸಿ ಸಂಭ್ರಮಿಸಿದರು.
Advertisement
#WATCH | Hon’ble Chief Minister Nara Chandrababu Naidu Garu takes oath as MLA as Assembly session commences. pic.twitter.com/7MlbbqtQ5A
— CMO Andhra Pradesh (@AndhraPradeshCM) June 21, 2024
Advertisement
ಇನ್ನೊಂದು ಕಡೆ ಮಾಜಿ ಸಿಎಂ ವೈಎಸ್ ಜಗನ್‌ಮೋಹನ್‌ರೆಡ್ಡಿ (Jagan Mohan Reddy) ಹಿಂಬಾಗಿಲ ಮೂಲಕ ವಿಧಾನಸಭೆಗೆ ಕಾಲಿಟ್ಟದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಇಂಡೋ-ಪಾಕ್ ಗಡಿಯಲ್ಲಿ ಸೈನಿಕರೊಂದಿಗೆ ಯೋಗ ಪ್ರದರ್ಶಿಸಿದ ಶ್ವಾನಗಳು
Advertisement
2021ರಲ್ಲಿ ಆಗಿದ್ದು ಏನು?
ನವೆಂಬರ್ 19 ರಂದು ಆಗಿನ ಆಡಳಿತದಲ್ಲಿದ್ದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಸದಸ್ಯರು ತಮ್ಮ ಪತ್ನಿಯ ಬಗ್ಗೆ ಮಾಡಿದ ನಿಂದನೆಯ ಹೇಳಿಕೆಯಿಂದ ಬೇಸರಗೊಂಡು ಸದನವನ್ನು ತೊರೆದಿದ್ದರು. ಮಹಿಳಾ ಸಬಲೀಕರಣದ ಚರ್ಚೆಯ ವೇಳೆ ವಿಧಾನಸಭೆಯಿಂದ ಹೊರನಡೆಯುವ ಮುನ್ನ ಚಂದ್ರಬಾಬು ನಾಯ್ಡು ಕಣ್ಣೀರು ಹಾಕಿದ್ದರು.
Biggest Challenge In AP Politics Kept
ముఖ్యమంత్రిగా నే సభలోకి వస్తా అని శపథం చేసిన చంద్రబాబు నాయుడు…
ఇప్పుడు “నారా చంద్రబాబు నాయుడు అనే నేను…”#ChandrababuNaidu pic.twitter.com/kAlpyhh3mu
— M9 NEWS (@M9News_) June 21, 2024
ಇದು ಮಹಾಭಾರತದಲ್ಲಿ ದ್ರೌಪದಿಯನ್ನು ಅವಮಾನಿಸಿದ ಕೌರವರ ಸಭೆ ಎಂದು ಕಣ್ಣೀರು ಹಾಕಿದ್ದ ಚಂದ್ರಬಾಬು ನಾಯ್ಡು ಇನ್ನು ಮುಂದೆ ನಾನು ಈ ಸಭೆಗೆ ಹಾಜರಾಗುವುದಿಲ್ಲ. ನಾನು ಮುಖ್ಯಮಂತ್ರಿಯಾದ ನಂತರವೇ ಸದನಕ್ಕೆ ಮರಳುತ್ತೇನೆ ಪ್ರತಿಜ್ಞೆ ಮಾಡಿದ್ದರು.
ಈ ಬಾರಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಟಿಡಿಪಿ, ಜನಾಸೇನಾ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು. ಈ ಬಾರಿ ಒಟ್ಟು 175 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಟಿಡಿಪಿ 135, ಜನಸೇನಾ 21, ವೈಎಸ್‌ಆರ್‌ಸಿಪಿ 11, ಬಿಜೆಪಿ 8 ಸ್ಥಾನಗಳನ್ನು ಗೆದ್ದುಕೊಂಡಿತ್ತು. 2019ರ ಚುನಾವಣೆಯಲ್ಲಿ ಬಹಳಷ್ಟು ಸೊಷಿಯಲಿಸ್ಟ್, ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡಿದ್ದ ಪರಿಣಾಮ ಜಗನ್ ನೇತೃತ್ವದ ವೈಎಸ್‌ಅರ್‌ಸಿಪಿ ಕಾಂಗ್ರೆಸ್ 151, ಟಿಡಿಪಿ 23, ಜನಸೇನಾ 1 ಸ್ಥಾನವನ್ನು ಗೆದ್ದುಕೊಂಡಿತ್ತು.