ತಂದೆಯನ್ನು ಕೊಲ್ಲುವ ಉದ್ದೇಶದಿಂದ ಜೈಲಿನಲ್ಲಿಟ್ಟಿದ್ದಾರೆಂದು ನಾರಾ ಲೋಕೇಶ್ ಆರೋಪ
ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು (Chandrababu Naidu) ಅವರಿಗೆ ಜೈಲಿನಲ್ಲಿ (Jail) ಝಡ್ ಪ್ಲಸ್ ಭದ್ರತೆ ಇದ್ದರೂ ಅವರಿರುವ ಕೊಠಡಿಯಲ್ಲಿ ವಿಪರೀತ ಸೊಳ್ಳೆಗಳಿವೆ (Mosquito) ಎನ್ನಲಾಗಿದೆ. ತಮ್ಮ ತಂದೆಯನ್ನು ಕೊಲ್ಲಲು ಜೈಲಿನಲ್ಲಿಟ್ಟಿರುವುದಾಗಿ ಅವರ ಪುತ್ರ ನಾರಾ ಲೋಕೇಶ್ ಆರೋಪಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಬರೆದುಕೊಂಡಿರುವ ನಾರಾ ಲೋಕೇಶ್, ಮುಖ್ಯಮಂತ್ರಿ ಜಗನ್ ರೆಡ್ಡಿ ತನ್ನ ತಂದೆಯನ್ನು ಕೊಲ್ಲುವ ಉದ್ದೇಶದಿಂದ ಜೈಲಿನಲ್ಲಿಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರು ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ ಎಂದು ಲೋಕೇಶ್ ಆರೋಪಿಸಿದ್ದಾರೆ. ಈ ಹಿನ್ನೆಲೆ ತಮ್ಮ ತಂದೆಯ ಆರೋಗ್ಯದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
Advertisement
Advertisement
ಜೈಲಿನಲ್ಲಿ ಸೊಳ್ಳೆ ಕಡಿತದ ಬಗ್ಗೆ ಚಂದ್ರಬಾಬು ನಾಯ್ಡು ಅವರ ದೂರುಗಳನ್ನು ಜೈಲು ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಲೋಕೇಶ್ ಆರೋಪಿಸಿದ್ದಾರೆ. ಅದೇ ರೀತಿ ಟಿಡಿಪಿ ಆಂಧ್ರಪ್ರದೇಶದ ಅಧ್ಯಕ್ಷ ಕಿಂಜರಾಪು ಅಚ್ಚನ್ನೈಡು ಅವರು ಕೂಡಾ ಜೈಲಿನಲ್ಲಿ ತೀವ್ರ ಸೊಳ್ಳೆಗಳ ಹಾವಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಜೈಲು ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಪಾಲಿಸಿಲ್ಲ ಎಂದಿದ್ದಾರೆ. ಡೆಂಗ್ಯೂಗೆ ಕೈದಿಯೊಬ್ಬರು ಸಾವನ್ನಪ್ಪಿದ ನಂತರ ಈ ಆತಂಕಗಳು ತೀವ್ರಗೊಂಡಿವೆ ಎಂದು ಅವರು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಆರು ವರ್ಷದ ನಂತರ ಕಾರವಾರಕ್ಕೆ ಬಂದಿಳಿದ ಟುಪೋಲೆವ್ ಯುದ್ಧ ವಿಮಾನ
Advertisement
ಈ ಹಿಂದೆ ಟಿಡಿಪಿ ಅವಧಿಯಲ್ಲಿ ಮಾಜಿ ಹಣಕಾಸು ಸಚಿವ ಯನಮಲ ರಾಮಕೃಷ್ಣುಡು ಅವರು ಕೂಡಾ ಇದೇ ರೀತಿ ಸೊಳ್ಳೆ ಕಾಟದ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದ್ದರು. ಸೆಪ್ಟೆಂಬರ್ 18 ರಂದು ಕೇಂದ್ರ ಕಾರಾಗೃಹದಲ್ಲಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ನಂತರ ರಾಮಕೃಷ್ಣುಡು ಚಂದ್ರಬಾಬು ನಾಯ್ಡು ಅವರ ಜೈಲು ಕೋಣೆಯಲ್ಲಿ ವಿಪರೀತ ಸೊಳ್ಳೆಗಳಿವೆ ಎಂಬುದನ್ನು ತಿಳಿದುಕೊಂಡರು. ಈ ಬಗ್ಗೆ ವಿಚಾರಿಸಿದಾಗ ಸೊಳ್ಳೆಪರದೆ, ಹಾಸಿಗೆ ಮತ್ತಿತರ ವಸ್ತುಗಳನ್ನು ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಅಸಮರ್ಪಕ ಸೌಲಭ್ಯಗಳು ಇರುವುದು ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.
Advertisement
ಟಿಡಿಪಿ ನಾಯಕರಿಂದ ಹಲವಾರು ದೂರುಗಳ ಹೊರತಾಗಿಯೂ ಜೈಲು ಅಧಿಕಾರಿಗಳು ಸಮಸ್ಯೆಗಳಿಗೆ ಪರಿಹಾರ ನೀಡದ ಕಾರಣ ಚಂದ್ರಬಾಬು ನಾಯ್ಡು ಅವರ ಬಂಧನದ ಸಮಯದಲ್ಲಿ ತೊಂದರೆಗಳನ್ನು ಉಂಟುಮಾಡಿದರು ಎಂದು ಪಕ್ಷ ಹೇಳಿದೆ. ರಾಜ್ಯಾದ್ಯಂತ ಜನರು ಮಾಜಿ ಸಿಎಂ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಿದ್ದರೂ, ಈ ಕಳವಳಗಳನ್ನು ಪರಿಹರಿಸಲು ಅಧಿಕಾರಿಗಳು ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಪಕ್ಷ ಆರೋಪಿಸಿದೆ. ಇದನ್ನೂ ಓದಿ: ಮದುವೆ ಹಾಲ್‍ನಲ್ಲಿ ಅಗ್ನಿ ಅವಘಡ- 100 ಮಂದಿ ದುರ್ಮರಣ
Web Stories