ದಾವಣಗೆರೆ: ಶಾಸಕ ರೇಣುಕಾಚಾರ್ಯ (Renukacharya) ಸಹೋದರನ ಪುತ್ರನ ಸಾವು ನಾನಾ ಅನುಮಾನಗಳನ್ನು ಹುಟ್ಟಿಹಾಕಿವೆ. ಅದರಲ್ಲಿ ಆತನ ಸಾವು ಆತ್ಮಹತ್ಯೆಯೋ, ಕೊಲೆಯೋ, ಇಲ್ಲ ಆಕ್ಸಿಡೆಂಟ್ ಎನ್ನುವ ಪ್ರಶ್ನೆಗಳೇ ಹೆಚ್ಚು, ಆದರೆ ರೇಣುಕಾಚಾರ್ಯ ಸೇರಿದಂತೆ ಅವರ ಕುಟುಂಬಸ್ಥರು ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಆರೋಪ ಮಾಡಿದ್ದಾರೆ. ಏನೇ ಆಗಲಿ ವರದಿ ಬಂದ ನಂತರ ಸತ್ಯಾಸತ್ಯತೆ ತಿಳಿಯಲಿದ್ದು. ಇಂದು ವರದಿ ಬರುವ ಸಾಧ್ಯತೆ ಇದ್ದು, ಏನಾದ್ರು ಅಪಘಾತ ಬಂತು ಎಂದರೆ ಹೆಚ್ಚಿನ ತನಿಖೆಗೆ ಒತ್ತಾಯಿಸುವ ಸಾಧ್ಯತೆ ಹೆಚ್ಚಿದೆ.
Advertisement
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರು (Chandrashekhar) ಸಾವಿನ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಚಂದ್ರು ಸಾವಿಗೆ ನಿಖರವಾದ ಕಾರಣ ಇಂದು ಹೊರಬೀಳುವ ಸಾಧ್ಯತೆ ಇದೆ. ಈಗಾಗ್ಲೇ ಇದು ಕೊಲೆಯಲ್ಲ, ಅಪಘಾತದಿಂದ ಉಂಟಾದ ಸಾವು ಎಂಬುದು ಪೊಲೀಸ್ ಹಾಗೂ ಎಫ್‍ಎಸ್‍ಎಲ್ (FSL) ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗುತ್ತಿದೆ. ಆದರೆ ರೇಣುಕಾಚಾರ್ಯ ಕುಟುಂಬಸ್ಥರು ಮಾತ್ರ ಇದೊಂದು ಪೂರ್ವನಿಯೋಜಿತ ಕೊಲೆ ಅಂತ ಆರೋಪ ಮಾಡಿರೋದೇ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿರೋದು. ಇಂದು ಚಂದ್ರು ಪೋಸ್ಟ್‍ಮಾರ್ಟ್‍ಂ ವರದಿ ಹಾಗೂ ಎಫ್‍ಎಸ್‍ಎಲ್ ರಿಪೋರ್ಟ್ ಪೊಲೀಸರ ಕೈ ಸೇರುವ ಸಾಧ್ಯತೆ ಇದೆ. ಇದನ್ನೂ ಓದಿ: ಚಂದ್ರು ದೇಹದಲ್ಲಿ ಒಳ ಉಡುಪು ಇರಲಿಲ್ಲ – ಸ್ನೇಹಿತರ ಸಲಿಂಗಕಾಮಕ್ಕೆ ಬಲಿಯಾದ್ರಾ ಯುವ ನಾಯಕ?
Advertisement
Advertisement
ಈಗಾಗಲೇ ಘಟನೆ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆ (Honnalli Police Station) ಯಲ್ಲಿ 302 ಹಾಗೂ 201 ಕೇಸ್ ಕೂಡ ದಾಖಲಾಗಿದೆ. ಚಂದ್ರುವಿನ ಕೊಲೆಯಾಗಿದೆ, ಅಲ್ಲದೆ ಆತನನ್ನು ಕೊಲೆ ಮಾಡಿ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತ ಎಫ್‍ಎಸ್‍ಎಲ್ ಅಧಿಕಾರಿಗಳ ಎರಡು ತಂಡ ಅಪಘಾತ ನಡೆದ ಹೊನ್ನಾಳಿ ಬಳಿ ಇರುವ ತುಂಗಾ ಮೇಲ್ದಂಡೆ ಕಾಲುವೆ ಬಳಿ ಪರಿಶೀಲನೆ ಮಾಡಿ ಎವಿಡೆನ್ಸ್ ಕಲೆಕ್ಟ್ ಮಾಡಿದ್ದಾರೆ. ಪೊಲೀಸರು ಕೂಡ ಟೆಕ್ನಿಕಲ್ ಎವಿಡೆನ್ಸ್ ಕೂಡ ಕಲೆಕ್ಟ್ ಮಾಡಿಲಾಗಿದ್ದು, ಇದೊಂದು ಅಪಘಾತ, ಓವರ್ ಸ್ಪೀಡ್‍ನಲ್ಲಿ ಬಂದ ಹಿನ್ನೆಲೆ ಚಾನಲ್ ನಲ್ಲಿ ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
Advertisement
ಶಾಸಕ ರೇಣುಕಾಚಾರ್ಯ ಮಾತ್ರ ಇದೊಂದು ಪ್ರೀ ಪ್ಲಾನ್ ಮರ್ಡರ್ ಎಂದು ಆರೋಪ ಮಾಡುತ್ತಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ಇದನ್ನು ಅಪಘಾತ ಎಂದು ಪರಿಗಣಿಸಿದ್ದು, ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ತನಿಖೆ ನಡೆಸುವವರು ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು. ಅದನ್ನು ಬಿಟ್ಟು ತನಿಖೆ ಪ್ರಗತಿಯಲ್ಲಿ ಇರುವಾಗ ಮಾಧ್ಯಮಗಳ ಮುಂದೆ ಇದೊಂದು ಅಪಘಾತ ಆಗಿರಬಹುದು ಎಂದು ಹೇಳಿದ್ದಾರೆ. ಇದರಿಂದ ಆರೋಪಿಗಳನ್ನು ತಪ್ಪಿಸುವ ಕೆಲಸ ಮಾಡುತ್ತಿದ್ದರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಅಪಘಾತ ಎಂದು ಬಂದರೆ, ಉನ್ನತ ತನಿಖೆಗೆ ಒತ್ತಾಯಿಸುವ ಎಲ್ಲಾ ಸಿದ್ಧತೆಯನ್ನು ರೇಣುಕಾಚಾರ್ಯ ಕುಟುಂಭಸ್ಥರು ಹಾಗೂ ಅವರ ಆಪ್ತರು ಮಾಡಿಕೊಂಡಿದ್ದಾರೆ.
ಒಟ್ಟಾರೆಯಾಗಿ ಚಂದ್ರು ಸಾವಿಗೆ ಕಾರಣ ಏನು ಎಂಬುದು ಪೋಸ್ಟ್ ಮಾರ್ಟಂ ವರದಿ ಬಂದ ನಂತರ ಗೊತ್ತಾಗಲಿದೆ. ಇಂದು ಸಂಜೆಯೊಳಗೆ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈ ಸೇರೋ ಸಾಧ್ಯತೆ ಇದೆ. ಅ ವರದಿಯ ಮೇಲೆ ರೇಣುಕಾಚಾರ್ಯರ ನಡೆ ತೀರ್ಮಾನಗೊಂಡಿದೆ.